ಚಾರ್ಮಾಡಿ ಘಾಟಿಯಲ್ಲಿ ಭಾರಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯ ಪ್ರದೇಶಕ್ಕೆ ಬೆಂಕಿ

ಚಾರ್ಮಾಡಿ ಘಾಟಿಯಲ್ಲಿ ಭಾರಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯ ಪ್ರದೇಶಕ್ಕೆ ಬೆಂಕಿ

ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Updated By: ಗಂಗಾಧರ​ ಬ. ಸಾಬೋಜಿ

Updated on: Jan 20, 2025 | 8:27 PM

ಚಾರ್ಮಾಡಿ ಘಾಟ್‌ನ ಬಿದಿರು ಪ್ರದೇಶದಲ್ಲಿ ಭಾರಿ ಕಾಡ್ಗಿಚ್ಚು ಹರಡಿದೆ. ನೂರಾರು ಎಕರೆ ಅರಣ್ಯ ಪ್ರದೇಶ ನಾಶವಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಈ ಘಟನೆಯಿಂದ ಅಪರೂಪದ ಸಸ್ಯ ಮತ್ತು ಪ್ರಾಣಿ ಸಂಪತ್ತು ಅಪಾಯದಲ್ಲಿದೆ. ಅರಣ್ಯ ಇಲಾಖೆಯ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ.

ಚಿಕ್ಕಮಗಳೂರು, ಜನವರಿ 20: ಪಶ್ಚಿಮ ಘಟ್ಟಗಳ ಸಾಲಿನ ಸೂಕ್ಷ್ಮ ಪ್ರದೇಶದಲ್ಲಿ ಭಾರಿ ಕಾಡ್ಗಿಚ್ಚು ಕಾಣಿಸಿಕೊಂಡಿದೆ. ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್​ನ (Charmadi Ghat) ಬಿದಿರುತಳ ಪ್ರದೇಶದಲ್ಲಿ ಕಾಡ್ಗಿಚ್ಚು ಹೊತ್ತಿಕೊಂಡಿದ್ದು, ನೂರಾರು ಎಕರೆ ಅರಣ್ಯ ಪ್ರದೇಶಕ್ಕೆ ಬೆಂಕಿ ವ್ಯಾಪಿಸಿದೆ. ಪ್ರಾಣಿ ಸೇರಿದಂತೆ ಅಪರೂಪದ ಸಸ್ಯ ಸಂಪತ್ತು ನಾಶವಾಗಿದೆ. ಸದ್ಯ ಅರಣ್ಯ ಇಲಾಖೆಯ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.