Yash: ಅದಿತಿ ಪ್ರಭುದೇವಗೆ ರಾಕಿ ಭಾಯ್ ಹೇಗೆ ವಿಶ್ ಮಾಡಿದ್ರು ನೋಡಿ
ನಟಿ ಅದಿತಿ ಪ್ರಭುದೇವ ಅವರು ಹಸೆಮಣೆ ಏರುತ್ತಿದ್ದಾರೆ. ಸೋಮವಾರ (ನ.28) ಬೆಳಗ್ಗೆ 9.30ಕ್ಕೆ ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ನಲ್ಲಿ ಯಶಸ್ವಿ (ಯಶಸ್) ಜೊತೆ ಸಪ್ತಪದಿ ತುಳಿಯಲಿದ್ದಾರೆ.
ನಟಿ ಅದಿತಿ ಪ್ರಭುದೇವ (Aditi Prabhudeva) ಅವರು ಹಸೆಮಣೆ ಏರುತ್ತಿದ್ದಾರೆ. ಸೋಮವಾರ (ನ.28) ಬೆಳಗ್ಗೆ 9.30ಕ್ಕೆ ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ನಲ್ಲಿ ಯಶಸ್ವಿ (ಯಶಸ್) ಜೊತೆ ಸಪ್ತಪದಿ ತುಳಿಯಲಿದ್ದಾರೆ. ಇಂದು (ನ.27) ಅದ್ದೂರಿಯಾಗಿ ಆರತಕ್ಷತೆ ಕಾರ್ಯಕ್ರಮ ನಡೆಯುತ್ತಿದೆ. ಸ್ಯಾಂಡಲ್ವುಡ್ನ ಹಲವು ಗಣ್ಯರು, ನಟ, ನಟಿಯರು, ನಿರ್ದೇಶಕರು, ನಿರ್ಮಾಪಕರು ಭಾಗಿಯಾಗಿದ್ದಾರೆ. ನಟ ರಾಕಿಂಗ್ ಸ್ಟಾರ್ ಯಶ್ ಮತ್ತು ರಾಧಿಕಾ ಪಂಡಿತ್ ದಂಪತಿ ಕೂಡ ಆರತಕ್ಷತೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ನವಜೋಡಿಗೆ ಒಳ್ಳೆಯದಾಗಲಿ, ನೂರು ವರ್ಷ ಚೆನ್ನಾಗಿರಲಿ ಎಂದು ಶುಭಕೋರಿದ್ದಾರೆ.
ಮತ್ತಷ್ಟು ಸಿನಿಮಾ ವಿಡಿಯೋಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.