Video: ದನದ ಕೊಟ್ಟಿಗೆಯಲ್ಲಿ ಮೂರು ಮರಿಗಳಿಗೆ ಜನ್ಮ ನೀಡಿದ ಚಿರತೆ

Updated on: Aug 09, 2024 | 10:32 AM

ಚಿರತೆಯೊಂದು ದನದ ಕೊಟ್ಟಿಗೆಯಲ್ಲಿ ಮೂರು ಮರಿಗಳಿಗೆ ಜನ್ಮ ನೀಡಿದೆ. ಮಾಹಿತಿ ತಿಳಿದು ಗ್ರಾಮಸ್ಥರು ಬಂದಾಗ ಚಿರತೆ ಅಲ್ಲಿಂದ ಓಡಿ ಹೋಗಿದೆ. ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಚಿರತೆ ಮರಿಗಳನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.

ಮಹಾರಾಷ್ಟ್ರ: ಚಿರತೆಯೊಂದು ದನದ ಕೊಟ್ಟಿಗೆಯಲ್ಲಿ ಮೂರು ಮರಿಗಳಿಗೆ ಜನ್ಮ ನೀಡಿರುವ ಘಟನೆ ಮಹಾರಾಷ್ಟ್ರದ ಚಂದ್ರಾಪುರ ಜಿಲ್ಲೆಯ ಬಾಲಾಪುರ ಗ್ರಾಮದಲ್ಲಿ ನಡೆದಿದೆ. ಒಂದು ವಾರದಿಂದ ಈ ಪ್ರದೇಶದಲ್ಲಿ ಚಿರತೆಯೊಂದು ಸುತ್ತಾಡಿ ಆರು ಜನರ ಮೇಲೆ ದಾಳಿ ಮಾಡಿತ್ತು. ಈ ದಾಳಿಯಲ್ಲಿ ಓರ್ವ ಸಾವನ್ನಪ್ಪಿದ್ದು, ಮತ್ತೊಬ್ಬನ ಸ್ಥಿತಿ ಚಿಂತಾಜನಕವಾಗಿದೆ. ಇದಲ್ಲದೆ, ಚಿರತೆ ಅನೇಕ ಪ್ರಾಣಿಗಳ ಮೇಲೆ ದಾಳಿ ಮಾಡಿ ಕೊಂದಿತ್ತು. ಇದೀಗ ಬಾಳಾಪುರ ಗ್ರಾಮದ ಹೊರವಲಯದಲ್ಲಿ ರೈತ ದಿಮ್‌ದೇವ್ ಸಾಲೋಟೆ ಎಂಬುವರಿಗೆ ಸೇರಿದ ದನದ ಕೊಟ್ಟಿಗೆಯಲ್ಲಿ ಚಿರತೆ ಸೋಮವಾರ ಬೆಳಗ್ಗೆ ಮೂರು ಮರಿಗಳಿಗೆ ಜನ್ಮ ನೀಡಿದೆ.

ಮಾಹಿತಿ ತಿಳಿದು ಗ್ರಾಮಸ್ಥರು ಬಂದಾಗ ಚಿರತೆ ಅಲ್ಲಿಂದ ಓಡಿ ಹೋಗಿದೆ. ದನದ ಕೊಟ್ಟಿಗೆಯಲ್ಲಿ ಕಿರುಚಾಟ ಕೇಳಿದ ಸ್ಥಳೀಯರಿಗೆ ಮೂರು ಚಿರತೆ ಮರಿಗಳು ಕಾಣಿಸಿಕೊಂಡಿವೆ. ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ ನಂತರ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಚಿರತೆ ಮರಿಗಳನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಿದ್ದಾರೆ. ಮರಿಗಳು ನಾಪತ್ತೆಯಾಗಿರುವುದರಿಂದ ತಾಯಿ ಚಿರತೆ ಗ್ರಾಮಕ್ಕೆ ದಾಳಿ ಮಾಡುವ ಸಾಧ್ಯತೆ ಇದೆ ಎಂದು ಅರಣ್ಯಾಧಿಕಾರಿಗಳು ಜನರಿಗೆ ಎಚ್ಚರಿಕೆ ನೀಡಿದ್ದಾರೆ.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಇದನ್ನೂ ಓದಿ: ನಾಯಿ ಮಾಡಿದ ಕಿತ್ತಾಪತಿಯಿಂದ ಹೊತ್ತಿ ಉರಿದ ಮನೆ; ವಿಡಿಯೋ ಇಲ್ಲಿದೆ ನೋಡಿ

Published on: Aug 09, 2024 10:31 AM
Follow Us
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More