ನೈಸ್ ರೋಡ್ ಬನ್ನೇರುಘಟ್ಟ ರಸ್ತೆಯಲ್ಲಿ ವಾಹನ ಡಿಕ್ಕಿಯಾಗಿ ಚಿರತೆ ಸಾವು
ಬೆಂಗಳೂರಿನ ಬನ್ನೇರುಘಟ್ಟ ನೈಸ್ ರಸ್ತೆಯಲ್ಲಿ ವಾಹನವೊಂದು ಡಿಕ್ಕಿ ಹೊಡೆದು ಚಿರತೆ ಮೃತಪಟ್ಟ ಘಟನೆ ನಡೆದಿದೆ. ಇಂದು ಚಿರತೆಯ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆ ಕುರಿತು ಕಗ್ಗಲೀಪುರ ಅರಣ್ಯ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.
ಆನೇಕಲ್, ಮಾರ್ಚ್ 15: ಆನೇಕಲ್ ತಾಲೂಕಿನ ಬನ್ನೇರುಘಟ್ಟ ನೈಸ್ ರಸ್ತೆಯಲ್ಲಿ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಚಿರತೆಯೊಂದು ಸಾವನ್ನಪ್ಪಿದೆ. ಈ ಘಟನೆ ಶನಿವಾರ ಮಧ್ಯರಾತ್ರಿ ಸುಮಾರು ಒಂದು ಗಂಟೆ ವೇಳೆಗೆ ನಡೆದಿರುವುದು ತಿಳಿದುಬಂದಿದೆ. ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಚಿರತೆ ಗಂಭೀರವಾಗಿ ಗಾಯಗೊಂಡು, ರಸ್ತೆಯ ಕೆಳಭಾಗಕ್ಕೆ ಬಿದ್ದಿತ್ತು. ಸ್ಥಳದಲ್ಲೇ ಚಿರತೆ ಸಾವನ್ನಪ್ಪಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಇದು ಸುಮಾರು ಮೂರು ವರ್ಷದ ಹೆಣ್ಣು ಚಿರತೆ ಎಂದು ಗುರುತಿಸಲಾಗಿದೆ. ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಕಗ್ಗಲೀಪುರ ಅರಣ್ಯ ವಲಯದ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಮೃತ ಚಿರತೆಯನ್ನು ವಶಕ್ಕೆ ಪಡೆದು ಅರಣ್ಯ ಇಲಾಖೆಯ ಕಚೇರಿಗೆ ಸಾಗಿಸಲಾಗಿದೆ.
Loading...
Unable to load recommendations.
Follow Us