AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರು ಬೆಂಗಳೂರು ಹೆದ್ದಾರಿಯಲ್ಲಿ ಲಾರಿ ಪಲ್ಟಿ; ಕ್ಲೋರೈಡ್ ಸೋರಿಕೆಯಿಂದ ಆತಂಕ, ಭಾರೀ ಟ್ರಾಫಿಕ್ ಜಾಮ್

ತುಮಕೂರು ಬೆಂಗಳೂರು ಹೆದ್ದಾರಿಯಲ್ಲಿ ಲಾರಿ ಪಲ್ಟಿ; ಕ್ಲೋರೈಡ್ ಸೋರಿಕೆಯಿಂದ ಆತಂಕ, ಭಾರೀ ಟ್ರಾಫಿಕ್ ಜಾಮ್

ಗಣಪತಿ ಶರ್ಮಾ
| Edited By: |

Updated on:Jul 22, 2026 | 11:26 AM

Share

Nelamangala Traffic Jam: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಸಮೀಪ ಕ್ಲೋರೈಡ್ ಕೆಮಿಕಲ್ ತುಂಬಿದ್ದ ಲಾರಿ ಪಲ್ಟಿಯಾಗಿ ಸೋರಿಕೆ ಉಂಟಾಯಿತು. ಇದರಿಂದ ಸ್ಥಳೀಯರಲ್ಲಿ ಆತಂಕ ಮೂಡಿದರೆ, ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸುಮಾರು ಒಂದು ಕಿಲೋಮೀಟರ್‌ವರೆಗೆ ಟ್ರಾಫಿಕ್ ಜಾಮ್ ಉಂಟಾಯಿತು. ಸದ್ಯ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ, ಜುಲೈ 22: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಕುಲುವನಹಳ್ಳಿ ಗ್ರಾಮದ ಬಳಿ ಕ್ಲೋರೈಡ್ ಕೆಮಿಕಲ್ ತುಂಬಿಕೊಂಡು ಸಾಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಪರಿಣಾಮ ಕೆಮಿಕಲ್ ಸೋರಿಕೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಉಂಟಾಗಿದೆ. ಅಪಘಾತದಿಂದ ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸುಮಾರು ಒಂದು ಕಿಲೋಮೀಟರ್‌ವರೆಗೆ ವಾಹನ ಸಂಚಾರ ದಟ್ಟಣೆ ಉಂಟಾಯಿತು. ಮಾಹಿತಿ ತಿಳಿದು ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಭೇಟಿ ನೀಡಿ ಪರಿಸ್ಥಿತಿಯನ್ನು ನಿಯಂತ್ರಿಸುವ ಕಾರ್ಯಾಚರಣೆ ಕೈಗೊಂಡಿದ್ದಾರೆ.

ವರದಿ: ಮಂಜುನಾಥ್, ಟಿವಿ9, ನೆಲಮಂಗಲ

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Jul 22, 2026 10:26 AM

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More