AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಚ್ಛೇದನ ನೀಡಿದ್ದಕ್ಕೆ ಪತ್ನಿಯನ್ನು ಅಟ್ಟಾಡಿಸಿಕೊಂಡು ಹೋಗಿ ಆಸಿಡ್ ಹಾಕಿದ ಪತಿ; ಭಯಾನಕ ವಿಡಿಯೋ ವೈರಲ್

ವಿಚ್ಛೇದನ ನೀಡಿದ್ದಕ್ಕೆ ಪತ್ನಿಯನ್ನು ಅಟ್ಟಾಡಿಸಿಕೊಂಡು ಹೋಗಿ ಆಸಿಡ್ ಹಾಕಿದ ಪತಿ; ಭಯಾನಕ ವಿಡಿಯೋ ವೈರಲ್

ಅಕ್ಷಯ್​ ಪಲ್ಲಮಜಲು​​
|

Updated on: Mar 18, 2026 | 7:40 AM

Share

ಚೆನ್ನೈನ ಪಲ್ಲವರಂನಲ್ಲಿ ನಡೆದ ಘೋರ ಆಸಿಡ್ ದಾಳಿಯ ಕುರಿತು ಈ ವರದಿ. ವಿಚ್ಛೇದನ ಕೋರಿದ್ದ 29 ವರ್ಷದ ಸನಾ ಫಾತಿಮಾಳ ಮೇಲೆ ಆಕೆಯ ಪತಿ ಮೊಹಮ್ಮದ್ ಅಲಿ ಆಸಿಡ್ ಎರಚಿದ್ದಾನೆ. ಈ ದಾಳಿಯಿಂದ ಸನಾ ತನ್ನ ಎಡಗಣ್ಣಿನ ದೃಷ್ಟಿಯನ್ನು ಶಾಶ್ವತವಾಗಿ ಕಳೆದುಕೊಂಡಿದ್ದಾಳೆ. ಮೊಹಮ್ಮದ್ ಅಲಿ, ಮದ್ಯವ್ಯಸನಿ ಮತ್ತು ಕಿರುಕುಳ ನೀಡುವವನಾಗಿದ್ದು, ತಲೆಮರೆಸಿಕೊಂಡಿದ್ದಾನೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಇದು ಗೃಹ ಹಿಂಸೆಯ ಭೀಕರ ಮುಖವನ್ನು ಎತ್ತಿ ತೋರಿಸುತ್ತದೆ.

ಚೆನ್ನೈ, ಮಾ.18: ಪ್ರೀತಿಸಿ ಮದುವೆಯಾದ ಪತಿಯೇ ಪತ್ನಿಯ ಜೀವನವನ್ನು ಅಂಧಕಾರಕ್ಕೆ ತಳ್ಳಿದ ಘಟನೆ ಪಲ್ಲವರಂನ ಭಾರತಿ ನಗರದಲ್ಲಿ ನಡೆದಿದೆ. 29 ವರ್ಷದ ಸನಾ ಫಾತಿಮಾ ಸಂತ್ರಸ್ತ ಮಹಿಳೆಯಾಗಿದ್ದು, ಪತಿ ಮೊಹಮ್ಮದ್ ಅಲಿ ಸದ್ಯ ತಲೆಮರೆಸಿಕೊಂಡಿದ್ದಾನೆ.ಸನಾ ಫಾತಿಮಾ ಮತ್ತು ಅನಾಕಪುತ್ತೂರು ನಿವಾಸಿ ಮೊಹಮ್ಮದ್ ಅಲಿ 2020ರಲ್ಲಿ ಪ್ರೀತಿಸಿ ವಿವಾಹವಾಗಿದ್ದರು. ಇವರಿಗೆ ನಾಲ್ಕು ವರ್ಷದ ಮಗನಿದ್ದಾನೆ.ಮೊಹಮ್ಮದ್ ಅಲಿ ಮದ್ಯವ್ಯಸನಿಯಾಗಿದ್ದು, ಪ್ರತಿದಿನ ಕುಡಿದು ಬಂದು ಪತ್ನಿಗೆ ದೈಹಿಕ ಮತ್ತು ಮಾನಸಿಕ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಫಾತಿಮಾ ಪತಿಯಿಂದ ದೂರವಾಗಿ ತಾಯಿ ಮನೆಯಲ್ಲಿ ವಾಸವಿದ್ದರು ಮತ್ತು ವಿಚ್ಛೇದನಕ್ಕಾಗಿ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಪತ್ನಿ ನ್ಯಾಯಾಲಯಕ್ಕೆ ಹೋಗಿದ್ದರಿಂದ ಆಕ್ರೋಶಗೊಂಡಿದ್ದ ಮೊಹಮ್ಮದ್ ಅಲಿ, ಶೌಚಾಲಯ ಸ್ವಚ್ಛಗೊಳಿಸುವ ಆಸಿಡ್ ತಂದು ಫಾತಿಮಾ ಅವರ ಮುಖಕ್ಕೆ ನೇರವಾಗಿ ಎರಚಿದ್ದಾನೆ. ನೋವಿನಿಂದ ಕಿರುಚುತ್ತಾ ಫಾತಿಮಾ ಓಡಲು ಯತ್ನಿಸಿದರೂ ಬಿಡದ ಪತಿ, ಆಕೆಯನ್ನು ಬೆನ್ನಟ್ಟಿ ದಾಳಿ ಮಾಡಿದ್ದಾನೆ. ತಕ್ಷಣ ಸ್ಥಳೀಯರು ಮಧ್ಯಪ್ರವೇಶಿಸಿ ಫಾತಿಮಾ ಅವರನ್ನು ರಕ್ಷಿಸಿ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮಾರ್ಚ್ 15 ರಂದು ಫಾತಿಮಾ ಅವರು ತಮ್ಮ ತಾಯಿ ಮನೆಯ ಬಳಿ ಒಬ್ಬರೇ ನಡೆದುಕೊಂಡು ಹೋಗುತ್ತಿದ್ದಾಗ ಈ ಘೋರ ಕೃತ್ಯ ನಡೆದಿದೆ. ಆಸಿಡ್ ಫಾತಿಮಾ ಅವರ ಎಡಗಣ್ಣಿಗೆ ತಗುಲಿದ ಪರಿಣಾಮ ಅವರು ಶಾಶ್ವತವಾಗಿ ದೃಷ್ಟಿ ಕಳೆದುಕೊಂಡಿದ್ದಾರೆ. ಪಲ್ಲವರಂ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತಲೆಮರೆಸಿಕೊಂಡಿರುವ ಮೊಹಮ್ಮದ್ ಅಲಿಗಾಗಿ ತೀವ್ರ ಹುಡುಕಾಟ ನಡೆಸುತ್ತಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Akshay Pallamajalu
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More