Loading video

ಚೆನ್ನೈನಲ್ಲಿ ಭಾರೀ ಮಳೆ; ಪ್ರವಾಹದ ನೀರಿನಿಂದ ಎಂಜಿನಿಯರಿಂಗ್ ಕಾಲೇಜು ಜಲಾವೃತ

|

Updated on: Oct 16, 2024 | 9:11 PM

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಚಂಡಮಾರುತದ ಪರಿಣಾಮದಿಂದ ತಮಿಳುನಾಡಿನಲ್ಲಿ ಭಾರೀ ಮಳೆಯಾಗುತ್ತಿದೆ. ಚೆನ್ನೈನ ಹಲವು ತಗ್ಗು ಪ್ರದೇಶಗಳು ಜಲಾವೃತವಾಗಿದ್ದು, ಭಾರೀ ಮಳೆಗೆ ಸಂಬಂಧಿಸಿದ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಸತ್ಯಭಾಮಾ ಇಂಜಿನಿಯರಿಂಗ್ ಕಾಲೇಜು ನೀರಿನಲ್ಲಿ ಮುಳುಗಿರುವ ದೃಶ್ಯಗಳು ವೈರಲ್ ಆಗುತ್ತಿವೆ.

ಚೆನ್ನೈ: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಕಡಿಮೆ ಒತ್ತಡ ಚಂಡಮಾರುತವಾಗಿ ಮಾರ್ಪಟ್ಟಿದೆ. ಇದರಿಂದಾಗಿ ತಮಿಳುನಾಡಿನ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ. ಭಾರೀ ಮಳೆಯಿಂದಾಗಿ ಚೆನ್ನೈ ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳು ಜಲಾವೃತಗೊಂಡಿವೆ. ಜನಜೀವನ ಸ್ಥಗಿತಗೊಂಡಿದೆ. ಚೆನ್ನೈನ ಹಲವೆಡೆ 15 ಸೆಂ.ಮೀ.ಗೂ ಹೆಚ್ಚು ಮಳೆ ದಾಖಲಾಗಿದೆ. ಹಲವೆಡೆ ಮನೆಗಳಿಗೆ ನೀರು ನುಗ್ಗಿದೆ. ಚೆನ್ನೈನ ಉಪನಗರದಲ್ಲಿರುವ ಸತ್ಯಭಾಮಾ ಇಂಜಿನಿಯರಿಂಗ್ ಕಾಲೇಜಿಗೆ ಭಾರೀ ಪ್ರಮಾಣದಲ್ಲಿ ನೀರು ನುಗ್ಗಿದೆ. ಕೆಲವು ವಿದ್ಯಾರ್ಥಿಗಳು ಬೋಟ್‌ಗಳ ಸಹಾಯದಿಂದ ಕಾಲೇಜು ಹಾಸ್ಟೆಲ್‌ನಿಂದ ಹೊರಬರುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ