Chennamma Funeral: ಮಣ್ಣಲ್ಲಿ ಮಣ್ಣಾದ ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ‘ಚೆನ್ನಮ್ಮ‘
ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ಅವರ ಅಂತ್ಯಕ್ರಿಯೆ ನೆರವೇರಿದೆ. ಮಾವಿನಕೆರೆ ಬೆಟ್ಟದ ತಪ್ಪಲಿನ ಜಮೀನಿನಲ್ಲಿ ಕುಟುಂಬ ಸದಸ್ಯರು ಮತ್ತು ಸಾರ್ವಜನಿಕರ ಸಮ್ಮುಖದಲ್ಲಿ ಪಾರ್ಥಿವ ಶರೀರಕ್ಕೆ ಅಂತಿಮ ಸಂಸ್ಕಾರ ನೆರವೇರಿಸಲಾಯಿತು. ಧಾರ್ಮಿಕ ವಿಧಿವಿಧಾನಗಳೊಂದಿಗೆ ಚೆನ್ನಮ್ಮ ಅವರಿಗೆ ಅಂತಿಮ ನಮನ ಸಲ್ಲಿಸಲಾಯಿತು.
ಹಾಸನ, ಜುಲೈ 20: ಶನಿವಾರ ಸಂಜೆ ವಿಧಿವಶರಾಗಿದ್ದ ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡ ಅವರ ಪತ್ನಿ ಚೆನ್ನಮ್ಮ ಅವರ ಅಂತ್ಯಕ್ರಿಯೆ ಇಂದು ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಮಾವಿನಕೆರೆ ಗ್ರಾಮದ ತೋಟದಲ್ಲಿ ಒಕ್ಕಲಿಗ ಸಂಪ್ರದಾಯದಂತೆ ನೆರವೇರಿದೆ. ದೇವೇಗೌಡರೊಂದಿಗಿನ 72 ವರ್ಷಗಳ ಸುದೀರ್ಘ ದಾಂಪತ್ಯ ಯಾನವನ್ನು ಚೆನ್ನಮ್ಮ ಮುಗಿಸಿದ್ದಾರೆ. ಅಂತಿಮ ವಿಧಿವಿಧಾನದಲ್ಲಿ ಭಾಗಿಯಾಗಿದ್ದ ಪುತ್ರರಾದ ಹೆಚ್.ಡಿ ರಮೇಶ್, ಹೆಚ್‌ಡಿ ರೇವಣ್ಣ, ಮೊಮ್ಮಗ ಸೂರಜ್, ಚೆನ್ನಮ್ಮನವರ ಪಲ್ಲಕ್ಕಿಗೆ ಹೆಗಲು ಕೊಟ್ಟರು. ಸಮಾಧಿ ಗುಂಡಿಗೆ ಪಾರ್ಥಿವ ಶರೀರ ಇಳಿಸಿ ಅಂತಿಮ ಪೂಜೆ ಸಲ್ಲಿಸಲಾಗಿದ್ದು, ಮಕ್ಕಳು, ಮೊಮ್ಮಕ್ಕಳು, ಸೊಸೆಯಂದಿರು ಚೆನ್ನಮ್ಮನಿಗೆ ಹೂವು, ತುಳಸಿ, ಪತ್ರೆ ಸಮರ್ಪಿಸಿದರು. ಹೀಗೆ ಎಲ್ಲಾ ಪೂಜೆಗಳ ಬಳಿಕ ಸಕಲ ಸರ್ಕಾರಿ ಗೌರವದೊಂದಿಗೆ ಚೆನ್ನಮ್ಮನವರ ಅಂತ್ಯಕ್ರಿಯೆ ನೆರವೇರಿತು. 8 ದಶಕ ಸಾರ್ಥಕ ಜೀವನ ನಡೆಸಿದ್ದ ಚೆನ್ನಮ್ಮ, ರಂಗನಾಥನ ಬೆಟ್ಟದ ತಪ್ಪಲಿನಲ್ಲೇ ಮಣ್ಣಲ್ಲಿ ಮಣ್ಣಾದರು. ಸಿಎಂ ಡಿಕೆ ಶಿವಕುಮಾರ್, ಕೇಂದ್ರ ಸಚಿವರಾದ ಶಿವರಾಜ್ ಸಿಂಗ್ ಚೌಹಾಣ್, ಪ್ರಲ್ಹಾದ ಜೋಶಿ, ವಿ ಸೋಮಣ್ಣ ಸೇರಿದಂತೆ ಹಲವು ರಾಜಕೀಯ ನಾಯಕರು ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿದ್ದರು.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Jul 20, 2026 06:55 PM
ಕೆಪಿಎಸ್ಸಿ ನೇಮಕಾತಿ ಹಗರಣ: ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಜೈಲಿಗೆ!
Bigg Boss Kannada: ಬಿಗ್ಬಾಸ್ ಕನ್ನಡ ಸೀಸನ್ 13 ಸುದ್ದಿಗೋಷ್ಠಿ ಲೈವ್
‘ಅವರಿಗೆಲ್ಲ ಮೆಂಟಲ್ ಪ್ರಾಬ್ಲಂ’: ಟಾಕ್ಸಿಕ್ ಟ್ರೋಲ್ ಬಗ್ಗೆ ಪುಷ್ಪ ಮಾತು
ಸಿಐಡಿ ಅಧಿಕಾರಿಗಳ ಪ್ರಶ್ನೆಗೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಕಂಗಾಲು

