ಡಾ. ರಾಜ್ ಸಮಾಧಿ ಬಗ್ಗೆ ನಾನು ಹೇಳಿದ್ದರಲ್ಲಿ ಸತ್ಯ ಇದೆ ಅಂತ ಜನ ಒಪ್ಪಿದ್ದಾರೆ: ಚೇತನ್ ಅಹಿಂಸಾ
‘ನಾನು ಹೇಳಿದ್ದರಲ್ಲಿ ಸತ್ಯ ಇದೆ ಎಂದು ಕರ್ನಾಟಕದ ಜನರು ದೊಡ್ಡ ಪ್ರಮಾಣದಲ್ಲಿ ಒಪ್ಪಿಕೊಂಡಿದ್ದಾರೆ. ನಮಗೆ ಸಮಾನತೆಯ, ನ್ಯಾಯದ, ವೈಜ್ಞಾನಿಕತೆಯ ಸಮಾಜಬೇಕು. ಆ ನಿಟ್ಟಿನಲ್ಲಿ ಕೆಲಸ ಮಾಡೋಣ’ ಎಂದು ನಟ ಚೇತನ್ ಅಹಿಂಸಾ ಅವರು ಹೇಳಿದ್ದಾರೆ. ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಡಿಯೋ ಇಲ್ಲಿದೆ ನೋಡಿ..
‘ಆ ದಿನಗಳು’ ಸಿನಿಮಾ ಖ್ಯಾತಿಯ ನಟ ಚೇತನ್ ಅಹಿಂಸಾ ಅವರು ಡಾ. ರಾಜ್ಕುಮಾರ್ ಸಮಾಧಿ (Dr Rajkumar Samadhi) ಬಗ್ಗೆ ನೀಡಿದ್ದ ಹೇಳಿಕೆಯಿಂದ ಸಾಕಷ್ಟು ವಿವಾದ ಆಗಿತ್ತು. ರಾಜ್ಕುಮಾರ್ ಸಮಾಧಿಗೆ ಸರ್ಕಾರ ಎಕರೆಗಟ್ಟಲೆ ಜಾಗ ನೀಡಿದ್ದನ್ನು ಚೇತನ್ ಪ್ರಶ್ನಿಸಿದ್ದರು. ಅವರ ಹೇಳಿಕೆಯನ್ನು ರಾಜ್ಕುಮಾರ್ (Dr Rajkumar) ಅಭಿಮಾನಿಗಳು ವಿರೋಧಿಸಿದರು. ಹಾಗಿದ್ದರೂ ಕೂಡ ಚೇತನ್ ಅವರು ತಮ್ಮ ಹೇಳಿಕೆಗೆ ಬದ್ಧರಾಗಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಅವರು ಈ ಬಗ್ಗೆ ಮತ್ತೆ ಪ್ರತಿಕ್ರಿಯೆ ನೀಡಿದ್ದಾರೆ. ‘ಸರ್ಕಾರದ ಪಾಲಿಸಿಗೆ ಸಂಬಂಧಪಟ್ಟಂತೆ ನಾನು ಪ್ರಸ್ತಾಪ ಮಾಡಿದ್ದು. ನಾವೆಲ್ಲರೂ ಕೂಡ ರಾಜ್ಕುಮಾರ್ ಅವರ ಅಭಿಮಾನಿಗಳು. ಅವರ ಕಲಾಸೇವೆ ಅಪಾರ. ಆದರೆ ಸರ್ಕಾರ ಪಕ್ಷಪಾತ ಮಾಡಿದ ತಕ್ಷಣ ಏನು ಸಮಸ್ಯೆ ಆಗುತ್ತದೆ ಎಂಬುದನ್ನು ನಾನು ಸಣ್ಣದಾಗಿ ಮೂರು ಸಾಲಿನ ಪೋಸ್ಟ್ ಮಾಡಿದ್ದೆ. ಕೆಲವರಿಂದ ಅದು ದೊಡ್ಡದಾಗಿದೆ. ನಾನು ಹೇಳಿದ್ದರಲ್ಲಿ ಸತ್ಯ ಇದೆ ಎಂದು ಕರ್ನಾಟಕದ ಜನರು ದೊಡ್ಡ ಪ್ರಮಾಣದಲ್ಲಿ ಒಪ್ಪಿಕೊಂಡಿದ್ದಾರೆ. ಜಾಗೃತಿಗೆ ಕಾರಣ ಆಯಿತು ಅಂತ ಜನ ಹೇಳಿದ್ದಾರೆ. ನಮಗೆ ಸಮಾನತೆಯ, ನ್ಯಾಯದ, ವೈಜ್ಞಾನಿಕತೆಯ ಸಮಾಜಬೇಕು. ಆ ನಿಟ್ಟಿನಲ್ಲಿ ಕೆಲಸ ಮಾಡೋಣ’ ಎಂದು ಚೇತನ್ ಅಹಿಂಸಾ (Chetan Ahimsa) ಅವರು ಹೇಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published on: May 24, 2026 10:01 AM
ಬೆಳಗಾವಿಯಲ್ಲಿ ಭೀಕರ ಬರದ ಛಾಯೆ: ಬರಿದಾದ ಹಿಡಕಲ್ ಡ್ಯಾಂ
ಕೋಲಾರದ ಕುರುಬರಪೇಟೆಯಲ್ಲಿ ದೇಗುಲದ ಆವರಣದಲ್ಲಿ ಎಸ್ಐಆರ್ ಪ್ರಕ್ರಿಯೆ!
ಕೊಪ್ಪಳದ ಅಂಜನಾದ್ರಿ ದೇಗುಲಕ್ಕೆ ರಾಹುಲ್ ದ್ರಾವಿಡ್ ದಂಪತಿ ಭೇಟಿ
ಪತ್ನಿ, ತಮ್ಮನ ಜತೆ ಮಾಜಿ ಸಿಎಂ ಸಿದ್ದರಾಮಯ್ಯ ಮನೆಗೆ ತೆರಳಿ ಡಿಕೆಶಿ ಮಾತುಕತೆ

