ಬೀದಿ ನಾಯಿಯನ್ನು ಉಳಿಸಲು ಹೋಗಿ 17 ವರ್ಷದ ಸ್ಕೂಟಿ ಸವಾರ ಸಾವು
ಛತ್ತೀಸ್ಗಢದ ಭಿಲಾಯಿಯ ಸುಪೇಲಾ ಪ್ರದೇಶದಲ್ಲಿ ಸೋಮವಾರ ರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ 17 ವರ್ಷದ ಬಾಲಕ ಸಾವನ್ನಪ್ಪಿದ್ದಾನೆ. ತನ್ನ ಸ್ನೇಹಿತನೊಂದಿಗೆ ಸ್ಕೂಟರ್‌ನಲ್ಲಿ ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದ್ದು, ಬೀದಿ ನಾಯಿಯೊಂದು ಇದ್ದಕ್ಕಿದ್ದಂತೆ ಅವನ ಮುಂದೆ ಕಾಣಿಸಿಕೊಂಡಿದ್ದು, ಆತನ ಮೇಲೆ ದಾಳಿ ಮಾಡಲು ಪ್ರಯತ್ನಿಸಿತು. ಇದರಿಂದ ನಾಯಿಯನ್ನು ಉಳಿಸಲು ಪ್ರಯತ್ನಿಸುತ್ತಿದ್ದಾಗ ಸ್ಕೂಟರ್ ನಿಯಂತ್ರಣ ತಪ್ಪಿ ಇಬ್ಬರೂ ಸವಾರರು ಚರಂಡಿಗೆ ಬಿದ್ದಿದ್ದಾರೆ.
ಛತ್ತೀಸ್‌ಗಢ, ಜುಲೈ 17: ಭಿಲಾಯಿಯ ಸುಪೇಲಾ ಪ್ರದೇಶದಲ್ಲಿ ಸೋಮವಾರ ರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ (Accident) 17 ವರ್ಷದ ಬಾಲಕ ಸಾವನ್ನಪ್ಪಿದ್ದಾನೆ. ತನ್ನ ಸ್ನೇಹಿತನೊಂದಿಗೆ ಸ್ಕೂಟರ್‌ನಲ್ಲಿ ಹೋಗುತ್ತಿದ್ದಾಗ ಬೀದಿ ನಾಯಿಯೊಂದು ಆತನ ಸ್ಕೂಟರ್ಗೆ ಅಡ್ಡ ಬಂದು ದಾಳಿ ಮಾಡಲು ಮುಂದಾಗಿತ್ತು. ಆಗ ಆ ನಾಯಿಗೆ ಡಿಕ್ಕಿ ಹೊಡೆಯಬಾರದು ಎಂದು ಆತ ತಕ್ಷಣ ಸ್ಕೂಟಿಯನ್ನು ಬೇರೆಡೆ ತಿರುಗಿಸಿದಾಗ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದಿದ್ದಾನೆ. ಈ ಅಪಘಾತದಲ್ಲಿ ಆ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದರೆ, ಹಿಂದೆ ಕುಳಿತಿದ್ದ ಬಾಲಕ ಗಾಯಗೊಂಡಿದ್ದಾನೆ. ಇಡೀ ಘಟನೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಈಗ ಇಂಟರ್ನೆಟ್‌ನಲ್ಲಿ ವೈರಲ್ ಆಗುತ್ತಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

