ಬೀದಿ ನಾಯಿಯನ್ನು ಉಳಿಸಲು ಹೋಗಿ 17 ವರ್ಷದ ಸ್ಕೂಟಿ ಸವಾರ ಸಾವು

Updated on: Jul 17, 2025 | 10:47 PM

ಛತ್ತೀಸ್​ಗಢದ ಭಿಲಾಯಿಯ ಸುಪೇಲಾ ಪ್ರದೇಶದಲ್ಲಿ ಸೋಮವಾರ ರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ 17 ವರ್ಷದ ಬಾಲಕ ಸಾವನ್ನಪ್ಪಿದ್ದಾನೆ. ತನ್ನ ಸ್ನೇಹಿತನೊಂದಿಗೆ ಸ್ಕೂಟರ್‌ನಲ್ಲಿ ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದ್ದು, ಬೀದಿ ನಾಯಿಯೊಂದು ಇದ್ದಕ್ಕಿದ್ದಂತೆ ಅವನ ಮುಂದೆ ಕಾಣಿಸಿಕೊಂಡಿದ್ದು, ಆತನ ಮೇಲೆ ದಾಳಿ ಮಾಡಲು ಪ್ರಯತ್ನಿಸಿತು. ಇದರಿಂದ ನಾಯಿಯನ್ನು ಉಳಿಸಲು ಪ್ರಯತ್ನಿಸುತ್ತಿದ್ದಾಗ ಸ್ಕೂಟರ್ ನಿಯಂತ್ರಣ ತಪ್ಪಿ ಇಬ್ಬರೂ ಸವಾರರು ಚರಂಡಿಗೆ ಬಿದ್ದಿದ್ದಾರೆ.

ಛತ್ತೀಸ್‌ಗಢ, ಜುಲೈ 17: ಭಿಲಾಯಿಯ ಸುಪೇಲಾ ಪ್ರದೇಶದಲ್ಲಿ ಸೋಮವಾರ ರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ (Accident) 17 ವರ್ಷದ ಬಾಲಕ ಸಾವನ್ನಪ್ಪಿದ್ದಾನೆ. ತನ್ನ ಸ್ನೇಹಿತನೊಂದಿಗೆ ಸ್ಕೂಟರ್‌ನಲ್ಲಿ ಹೋಗುತ್ತಿದ್ದಾಗ ಬೀದಿ ನಾಯಿಯೊಂದು ಆತನ ಸ್ಕೂಟರ್​ಗೆ ಅಡ್ಡ ಬಂದು ದಾಳಿ ಮಾಡಲು ಮುಂದಾಗಿತ್ತು. ಆಗ ಆ ನಾಯಿಗೆ ಡಿಕ್ಕಿ ಹೊಡೆಯಬಾರದು ಎಂದು ಆತ ತಕ್ಷಣ ಸ್ಕೂಟಿಯನ್ನು ಬೇರೆಡೆ ತಿರುಗಿಸಿದಾಗ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದಿದ್ದಾನೆ. ಈ ಅಪಘಾತದಲ್ಲಿ ಆ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದರೆ, ಹಿಂದೆ ಕುಳಿತಿದ್ದ ಬಾಲಕ ಗಾಯಗೊಂಡಿದ್ದಾನೆ. ಇಡೀ ಘಟನೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಈಗ ಇಂಟರ್ನೆಟ್‌ನಲ್ಲಿ ವೈರಲ್ ಆಗುತ್ತಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ಸುಷ್ಮಾ ಚಕ್ರೆ

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More