ಬಿಸಿಯೂಟ ಮೆನುಗೆ ಚಿಕನ್ ಬಿರಿಯಾನಿ ಸೇರ್ಪಡೆಗೆ ತಮಿಳುನಾಡು ಸರ್ಕಾರ ಚಿಂತನೆ

Updated on: Sep 19, 2026 | 3:10 PM

ಸರ್ಕಾರಿ ಶಾಲಾ ಮಕ್ಕಳ ಬಿಸಿಯೂಟದ ಮೆನುವಿನಲ್ಲಿ ಚಿಕನ್ ಬಿರಿಯಾನಿಯನ್ನು ನೀಡುವ ಮಹತ್ವಾಕಾಂಕ್ಷೆಯ ಯೋಜನೆಯನ್ನು ಜಾರಿಗೊಳಿಸಲು ತಮಿಳುನಾಡು ಸರ್ಕಾರ ಮುಂದಾಗಿದೆ. ಈ ಹಿಂದೆ ಸಿಎಂ ವಿಜಯ್ ಜೋಸೆಫ್​ ಸರ್ಕಾರ ಸರ್ಕಾರಿ ಶಾಲೆ ಮಕ್ಕಳಿಗೆ ಚಿಕನ್ ಬಿರಿಯಾನಿ ನೀಡುವಾಗಿ ಘೋಷಣೆ ಮಾಡಿದ್ದರು. ಅದರಂತೆ ಈಗ ಪ್ರಯೋಗಿಕವಾಗಿ ಶುರುವಾದಂತಿದೆ. ಹೌದು.. ಮಕ್ಕಳ ಪೌಷ್ಟಿಕಾಂಶ ಹೆಚ್ಚಿಸುವ ನಿಟ್ಟಿನಲ್ಲಿ ಈ ಯೋಜನೆ ರೂಪಿಸಲಾಗುತ್ತಿದ್ದು, ಸಿಎಂ ಆಶಯದಂತೆ ಈ ಹೊಸ ಯೋಜನೆಗೆ ಸಿದ್ಧತೆಗಳು ನಡೆದಿವೆ.

ಬೆಂಗಳೂರು, (ಸೆಪ್ಟೆಂಬರ್ 19): ಸರ್ಕಾರಿ ಶಾಲಾ ಮಕ್ಕಳ ಬಿಸಿಯೂಟದ ಮೆನುವಿನಲ್ಲಿ ಚಿಕನ್ ಬಿರಿಯಾನಿಯನ್ನು ನೀಡುವ ಮಹತ್ವಾಕಾಂಕ್ಷೆಯ ಯೋಜನೆಯನ್ನು ಜಾರಿಗೊಳಿಸಲು ತಮಿಳುನಾಡು ಸರ್ಕಾರ ಮುಂದಾಗಿದೆ. ಈ ಹಿಂದೆ ಸಿಎಂ ವಿಜಯ್ ಜೋಸೆಫ್​ ಸರ್ಕಾರ ಸರ್ಕಾರಿ ಶಾಲೆ ಮಕ್ಕಳಿಗೆ ಚಿಕನ್ ಬಿರಿಯಾನಿ ನೀಡುವಾಗಿ ಘೋಷಣೆ ಮಾಡಿದ್ದರು. ಅದರಂತೆ ಈಗ ಪ್ರಯೋಗಿಕವಾಗಿ ಶುರುವಾದಂತಿದೆ. ಹೌದು.. ಮಕ್ಕಳ ಪೌಷ್ಟಿಕಾಂಶ ಹೆಚ್ಚಿಸುವ ನಿಟ್ಟಿನಲ್ಲಿ ಈ ಯೋಜನೆ ರೂಪಿಸಲಾಗುತ್ತಿದ್ದು, ಸಿಎಂ ಆಶಯದಂತೆ ಈ ಹೊಸ ಯೋಜನೆಗೆ ಸಿದ್ಧತೆಗಳು ನಡೆದಿವೆ.

ಈ ಬಗ್ಗೆ ತಮಿಳುನಾಡು ಶಿಕ್ಷಣ ಸಚಿವ ರಾಜ್ ಮೋಹನ್ ಪ್ರತಿಕ್ರಿಯಿಸಿದ್ದು, ಜೈಲಿನಲ್ಲಿರುವ ಕೈದಿಗಳಿಗೂ ಚಿಕನ್ ಬಿರಿಯಾನಿ ಸಿಗುತ್ತದೆ. ಹಾಗಾದರೆ ನಮ್ಮ ಸರ್ಕಾರಿ ಶಾಲೆಗಳಲ್ಲಿ ಓದುವ ಮುಗ್ಧ ವಿದ್ಯಾರ್ಥಿಗಳಿಗೆ ಆ ಭಾಗ್ಯ ಸಿಗಬಾರದೇ? ನಾವು ತರಲು ಮುಂದಾಗುತ್ತಿರುವ ಈ ಯೋಜನೆಯನ್ನು ಕೇವಲ ರಾಜಕೀಯ ದೃಷ್ಟಿಕೋನದಿಂದ ನೋಡಬಾರದು. ಬೆಳೆಯುವ ಮಕ್ಕಳಿಗೆ ಸಾಕಷ್ಟು ಪ್ರಮಾಣದ ಪ್ರೋಟೀನ್ ಮತ್ತು ಪೌಷ್ಟಿಕಾಂಶದ ಅವಶ್ಯಕತೆ ಇರುತ್ತದೆ. ತಮಿಳುನಾಡಿನಲ್ಲಿ ಶೈಕ್ಷಣಿಕ ಕ್ರಾಂತಿಯ ಜೊತೆಗೆ ಪೌಷ್ಟಿಕಾಂಶದ ಕ್ರಾಂತಿಯೂ ಕೈಜೋಡಿಸಿ ಸಾಗಬೇಕು ಎನ್ನುವುದು ಸರ್ಕಾರದ ಆಶಯವಾಗಿದೆ. ಚಿಕನ್ ಬಿರಿಯಾನಿ ತಿನ್ನದವರಿಗೆ ವೆಜ್ ತಿನ್ನಬಹುದು ಎಂದಿದ್ದಾರೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Sep 19, 2026 03:09 PM
Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More