ಶಾಸಕ ಲಕ್ಷ್ಮಣ ಸವದಿ ಪುತ್ರನಿಂದ ಹಲ್ಲೆ ಆರೋಪ: ಡಿಸಿಸಿ ಬ್ಯಾಂಕ್ ನೌಕರರ ಪ್ರತಿಭಟನೆ
ಶಾಸಕ ಲಕ್ಷ್ಮಣ ಸವದಿ ಪುತ್ರ ಚಿದಾನಂದ ಸವದಿ ವಿರುದ್ಧ ಡಿಸಿಸಿ ಬ್ಯಾಂಕ್ ನೌಕರರ ಮೇಲೆ ಹಲ್ಲೆ ಆರೋಪ ಕೇಳಿಬಂದಿದೆ. ನೌಕರರು ಚಿದಾನಂದ ಸವದಿಯ ಬಂಧನಕ್ಕೆ ಆಗ್ರಹಿಸಿ ಅಥಣಿ ಠಾಣೆ ಎದುರು ಪ್ರತಿಭಟನೆ ನಡೆಸಿದ್ದಾರೆ. ದುಡುಕಿನ ನಿರ್ಧಾರ ತೆಗೆದುಕೊಳ್ಳದಂತೆ ಲಕ್ಷ್ಮಣ ಸವದಿ ಅಭಿಮಾನಿಗಳಿಗೆ ಮನವಿ ಮಾಡಿರುವ ನಡುವೆ, ಸಾವಿರಾರು ಜನರು ಧರಣಿಯಲ್ಲಿ ಭಾಗವಹಿಸಿದ್ದಾರೆ.
ಬೆಳಗಾವಿ, ಜನವರಿ 04: ಶಾಸಕ ಲಕ್ಷ್ಮಣ ಸವದಿ ಪುತ್ರ ಚಿದಾನಂದ ಸವದಿ ವಿರುದ್ಧ ಡಿಸಿಸಿ ಬ್ಯಾಂಕ್ ನೌಕರರ ಮೇಲೆ ಹಲ್ಲೆ ನಡೆಸಿದ ಆರೋಪ ಕೇಳಿಬಂದಿದೆ. ಈ ಘಟನೆಯನ್ನು ಖಂಡಿಸಿ, ಸವದಿ ಪುತ್ರನನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿ ಡಿಸಿಸಿ ಬ್ಯಾಂಕ್ ನೌಕರರು ಪ್ರತಿಭಟನೆ ನಡೆಸಿದ್ದಾರೆ. ಅಥಣಿ ಪೊಲೀಸ್ ಠಾಣೆ ಎದುರು ಮತ್ತು ಡಿಸಿಸಿ ಬ್ಯಾಂಕ್ ಮುಂಭಾಗ ಎರಡೂ ಕಡೆ ಧರಣಿ ನಡೆದಿದ್ದು, ಸಾವಿರಾರು ಸಂಖ್ಯೆಯಲ್ಲಿ ಜನರು ಈ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ. ಪರಿಸ್ಥಿತಿ ಉದ್ವಿಗ್ನಗೊಂಡಿರುವ ಹಿನ್ನೆಲೆಯಲ್ಲಿ ಮತ್ತೊಂದೆಡೆ ಶಾಸಕ ಲಕ್ಷ್ಮಣ ಸವದಿ ಅವರ ನಿವಾಸದ ಬಳಿ ಅಭಿಮಾನಿಗಳು ಜಮಾಯಿಸಿದ್ದಾರೆ. ಯಾವುದೇ ದುಡುಕಿನ ನಿರ್ಧಾರಗಳನ್ನು ತೆಗೆದುಕೊಳ್ಳಬಾರದು ಎಂದು ಈ ವೇಳೆ ಲಕ್ಷ್ಮಣ ಸವದಿ ತಮ್ಮ ಅಭಿಮಾನಿಗಳಿಗೆ ಮನವಿ ಮಾಡಿಕೊಂಡಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
