Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ನಾಯಕರಿಗೆ ಬಯ್ಯುವುದೊಂದನ್ನು ಬಿಟ್ಟು ಬೇರೇನೂ ಗೊತ್ತಿಲ್ಲ; ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಅಧ್ಯಕ್ಷ

ಬಿಜೆಪಿ ನಾಯಕರಿಗೆ ಬಯ್ಯುವುದೊಂದನ್ನು ಬಿಟ್ಟು ಬೇರೇನೂ ಗೊತ್ತಿಲ್ಲ; ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಅಧ್ಯಕ್ಷ

ಅರುಣ್​ ಕುಮಾರ್​ ಬೆಳ್ಳಿ
|

Updated on: Aug 05, 2023 | 6:35 PM

ದೇಶ ಸುರಕ್ಷಿತವಾಗಿರಬೇಕಾದರೆ, ಸಂವಿಧಾನ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆ ಸುರಕ್ಷಿತವಾಗಿರಬೇಕಾದರೆ, ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಬೇಕು ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದರು.

ಕಲಬುರಗಿ: ನಗರದಲ್ಲಿ ಇಂದು ಕಾಂಗ್ರೆಸ್ ಸರ್ಕಾರದ ಗೃಹ ಜ್ಯೋತಿ ಯೋಜನೆಗೆ ಚಾಲನೆ ನೀಡಿದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತಾಡಿದ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge), ತಮ್ಮ ಮೈಬಣ್ಣದ (skin colour) ಅವಹೇಳನಕಾರಿ ಕಾಮೆಂಟ್ ಮಾಡಿದ ಬಿಜೆಪಿ ಶಾಸಕ ಆರಗ ಜ್ಞಾನೇಂದ್ರ (Araga Jnanendra) ಅವರನ್ನು ಸೂಚ್ಯವಾಗಿ ಖಂಡಿಸಿದರು. ಬಿಜೆಪಿ ನಾಯಕರಿಗೆ ಬೇರೆಯವರನ್ನು ಬಯ್ಯುವುದು ಬಿಟ್ಟರೆ ಬೇರೇನೂ ಬರೋದಿಲ್ಲ, ಅವರು ಬಡವರ, ದಲಿತರ, ಮಹಿಳೆಯರ ವಿರೋಧಿಯಾಗಿದ್ದಾರೆ ಎಂದ ಖರ್ಗೆ ಹೇಳಿದರು. ದೇಶ ಸುರಕ್ಷಿತವಾಗಿರಬೇಕಾದರೆ, ಸಂವಿಧಾನ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆ ಸುರಕ್ಷಿತವಾಗಿರಬೇಕಾದರೆ, ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಬೇಕು ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ