AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

CM DKS in Metro: ಮೆಟ್ರೋ ಪ್ರಯಾಣಿಕರ ಜೊತೆ ಸಿಎಂ ಡಿ.ಕೆ ಶಿವಕುಮಾರ್ ಫೋಟೋ !

CM DKS in Metro: ಮೆಟ್ರೋ ಪ್ರಯಾಣಿಕರ ಜೊತೆ ಸಿಎಂ ಡಿ.ಕೆ ಶಿವಕುಮಾರ್ ಫೋಟೋ !

ಭಾವನಾ ಹೆಗಡೆ
|

Updated on: Jun 07, 2026 | 12:08 PM

Share

ಸಿಎಂ ಆದ ಬಳಿಕ ಸ್ವಕ್ಷೇತ್ರ ಕನಕಪುರಕ್ಕೆ ಮೊದಲ ಭಾರಿಗೆ ಭೇಟಿ ನೀಡುತ್ತಿರುವ ಡಿಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಇಂದು ವಿಧಾನಸೌಧದಿಂದ ನಮ್ಮ ಮೆಟ್ರೋ ರೈಲಿನಲ್ಲಿ ಪ್ರಯಾಣ ಬೆಳೆಸಿದರು. ಈ ವೇಳೆ ಬಿಎಂಆರ್‌ಸಿಎಲ್‌ ಉನ್ನತಾಧಿಕಾರಿಗಳಿಂದ ಬೆಂಗಳೂರಿನ ಮೆಟ್ರೋ ಜಾಲ ಮತ್ತು ಮುಂಬರುವ ಸಂಪರ್ಕ ಯೋಜನೆಗಳ ಕುರಿತು ಪ್ರಮುಖ ಮಾಹಿತಿಗಳನ್ನು ಪಡೆದುಕೊಂಡರು.

ಬೆಂಗಳೂರು, ಜೂನ್ 07: ಸಿಎಂ ಆದ ಬಳಿಕ ಸ್ವಕ್ಷೇತ್ರ ಕನಕಪುರಕ್ಕೆ ಮೊದಲ ಭಾರಿಗೆ ಭೇಟಿ ನೀಡುತ್ತಿರುವ ಡಿಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಇಂದು ವಿಧಾನಸೌಧದಿಂದ ನಮ್ಮ ಮೆಟ್ರೋ ರೈಲಿನಲ್ಲಿ ಪ್ರಯಾಣ ಬೆಳೆಸಿದರು. ಈ ವೇಳೆ ಬಿಎಂಆರ್‌ಸಿಎಲ್‌ ಉನ್ನತಾಧಿಕಾರಿಗಳಿಂದ ಬೆಂಗಳೂರಿನ ಮೆಟ್ರೋ ಜಾಲ ಮತ್ತು ಮುಂಬರುವ ಸಂಪರ್ಕ ಯೋಜನೆಗಳ ಕುರಿತು ಪ್ರಮುಖ ಮಾಹಿತಿಗಳನ್ನು ಪಡೆದುಕೊಂಡರು.

ಮುಖ್ಯಮಂತ್ರಿಗಳನ್ನು ಮೆಟ್ರೋದಲ್ಲಿ ಕಂಡ ಸಾರ್ವಜನಿಕರು ಹಾಗೂ ಸಹಪ್ರಯಾಣಿಕರು ಅಚ್ಚರಿ ಮತ್ತು ಸಂತಸ ವ್ಯಕ್ತಪಡಿಸಿದರು. ಅನೇಕ ಮೆಟ್ರೋ ಪ್ರಯಾಣಿಕರು ಸಿಎಂ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಂಡು ಸಂಭ್ರಮಿಸಿದರು. ಇದೇ ಸಂದರ್ಭದಲ್ಲಿ ರೈಲಿನಲ್ಲಿದ್ದ ಮಕ್ಕಳು ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಹಸ್ತಲಾಘವ ಮಾಡಿದ ಡಿ.ಕೆ. ಶಿವಕುಮಾರ್ ಅವರು ಕುಶಲೋಪರಿ ವಿಚಾರಿಸಿದರು. ಸಿಲ್ಕ್ ಇನ್ಸ್ಟಿಟ್ಯೂಟ್ ನಿಲ್ದಾಣದವರೆಗೆ ಮೆಟ್ರೋದಲ್ಲಿಯೇ ತೆರಳಿದ ಮುಖ್ಯಮಂತ್ರಿಗಳು, ಅಲ್ಲಿಂದ ಮುಂದೆ ರಸ್ತೆ ಮಾರ್ಗವಾಗಿ ಕನಕಪುರಕ್ಕೆ ಪ್ರಯಾಣ ಬೆಳೆಸಿದರು.

ಕರ್ನಾಟಕದ ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
Bhavana Hegde
Bhavana Hegde

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More