CLP Meeting: ಬಜೆಟ್ ಮಂಡಿಸುವ ಮೊದಲು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಮೊನ್ನೆಯಷ್ಟೇ ವಿಧಾನ ಪರಿಷತ್ ಸದಸ್ಯರಾಗಿ ನೇಮಕಗೊಂಡಿರುವ ಹಿರಿಯ ರಾಜಕಾರಣಿ ಜಗದೀಶ್ ಶೆಟ್ಟರ್ ಸೇರಿದಂತೆ ಹಲವಾರು ಕಾಂಗ್ರೆಸ್ ಶಾಸಕರು ಸಿಎಲ್ ಪಿ ಸಭೆಯಲ್ಲಿ ಪಾಲ್ಗೊಂಡರು.
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಕೆಲವೇ ನಿಮಿಷಗಳ ಬಳಿಕ ತಮ್ಮ ರಾಜಕೀಯ ಬದುಕಿನ ದಾಖಲೆಯ 14 ನೇ ಬಜೆಟ್ ಅನ್ನು ವಿಧಾನ ಸಭೆಯಲ್ಲಿ ಮಂಡಿಸಲಿದ್ದಾರೆ. ಅದಕ್ಕಾಗಿ ಎಲ್ಲ ಸಿದ್ಧತೆಗಳು ಪೂರ್ಣಗೊಂಡಿವೆ. ಆದರೆ ಬಜೆಟ್ ಮಂಡನೆಗೂ ಮೊದಲು ಮುಖ್ಯಮಂತ್ರಿಯವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ (CLP meeting) ನಡೆಸಿದರು. ಈ ಸಭೆಗೆ ಮೊನ್ನೆಯಷ್ಟೇ ವಿಧಾನ ಪರಿಷತ್ ಸದಸ್ಯರಾಗಿ ನೇಮಕಗೊಂಡಿರುವ ಹಿರಿಯ ರಾಜಕಾರಣಿ ಜಗದೀಶ್ ಶೆಟ್ಟರ್ (Jagadish Shettar) ಸೇರಿದಂತೆ ಹಲವಾರು ಕಾಂಗ್ರೆಸ್ ಶಾಸಕರು ಸಿಎಲ್ ಪಿ ಸಭೆಯಲ್ಲಿ ಪಾಲ್ಗೊಳ್ಳಲು ಬರುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದು. ಸಚಿವರಾದ ಹೆಚ್ ಕೆ ಪಾಟೀಲ್, ಕೃಷ್ಣ ಭೈರೇಗೌಡ, ಮಧು ಬಂಗಾರಪ್ಪ, ಜಿ ಪರಮೇಶ್ವರ್, ಸಂತೋಷ್ ಲಾಡ್, ಕೆ ಹೆಚ್ ಮುನಿಯಪ್ಪ, ಬೋಸರಾಜು ಮೊದಲಾದವರು ಕಾಣುತ್ತಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos