ಹಿಜಾಬ್ ಧರಿಸಿದ್ದಕ್ಕೆ CET ಬರೆಯಲು ಅವಕಾಶ ನಿರಾಕರಣೆ: ವಿದ್ಯಾರ್ಥಿನಿಯ ತಂದೆಯಿಂದ ದೂರು
ಚಿಕ್ಕಬಳ್ಳಾಪುರದ ಬಿಜಿಎಸ್ ಸೈನ್ಸ್ ಅಕಾಡೆಮಿಯಲ್ಲಿ ಹಿಜಾಬ್ ಧರಿಸಿದ್ದ ವಿದ್ಯಾರ್ಥಿನಿಗೆ ಸಿಇಟಿ ಪರೀಕ್ಷೆಗೆ ಅವಕಾಶ ನಿರಾಕರಿಸಲಾಗಿದೆ. ಈ ಬಗ್ಗೆ ವಿದ್ಯಾರ್ಥಿನಿಯ ತಂದೆ ಕೆಇಎಗೆ ಲಿಖಿತ ದೂರು ನೀಡಿದ್ದು, ಘಟನೆ ಕುರಿತು ತನಿಖೆಗೆ ಆದೇಶಿಸಲಾಗಿದೆ. ಜಿಲ್ಲಾಧಿಕಾರಿಗಳಿಗೆ ವರದಿ ಸಲ್ಲಿಸಲು ಸೂಚಿಸಲಾಗಿದ್ದು, ವಿದ್ಯಾರ್ಥಿನಿ, ತಂದೆ ಹಾಗೂ ಪ್ರಾಂಶುಪಾಲರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಅವರು ಸೂಕ್ತ ಕ್ರಮದ ಭರವಸೆ ನೀಡಿದ್ದಾರೆ.
ಚಿಕ್ಕಬಳ್ಳಾಪುರ, ಏಪ್ರಿಲ್ 29: ಬಿಜಿಎಸ್ ಸೈನ್ಸ್ ಅಕಾಡೆಮಿಯಲ್ಲಿ ನಡೆದ ಸಿಇಟಿ ಪರೀಕ್ಷೆಯಲ್ಲಿ ಹಿಜಾಬ್ ಧರಿಸಿದ್ದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ನಿರಾಕರಿಸಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಪರೀಕ್ಷೆ ಬರೆಯಲು ಅವಕಾಶ ನಿರಾಕರಿಸಿದ ಕಾರಣ, ವಿದ್ಯಾರ್ಥಿನಿಯ ತಂದೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ (KEA) ಲಿಖಿತ ದೂರನ್ನು ಸಲ್ಲಿಸಿದ್ದಾರೆ. ದೂರಿನ ಆಧಾರದ ಮೇಲೆ, ಘಟನೆಯ ಕುರಿತು ತನಿಖೆ ನಡೆಸುವಂತೆ ಈಗಾಗಲೇ ಸೂಚನೆ ನೀಡಲಾಗಿದೆ. ತನಿಖಾ ವರದಿಯನ್ನು ಶೀಘ್ರವಾಗಿ ಸಲ್ಲಿಸುವಂತೆ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಈ ಪ್ರಕರಣದ ಕುರಿತು ತನಿಖಾ ತಂಡವು ವಿದ್ಯಾರ್ಥಿನಿ, ಆಕೆಯ ತಂದೆ ಮತ್ತು ಪರೀಕ್ಷಾ ಕೇಂದ್ರದ ಪ್ರಾಂಶುಪಾಲರನ್ನು ವಿಚಾರಣೆಗೊಳಪಡಿಸಿದೆ. ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಅವರು ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಸೂಕ್ತ ಕ್ರಮವನ್ನು ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್ ಕೈ ಹಿಡಿದ ಪಕ್ಷಗಳಾವುವು

