AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಮುಲ್ ಚುನಾವಣೆಯಲ್ಲಿ ಹರಿದ ಹಣದ ಹೊಳೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!

ಚಿಮುಲ್ ಚುನಾವಣೆಯಲ್ಲಿ ಹರಿದ ಹಣದ ಹೊಳೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!

ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on:Feb 01, 2026 | 6:21 PM

Share

ಚಿಕ್ಕಬಳ್ಳಾಪುರದ ಚಿಮುಲ್ ಚುನಾವಣೆಯಲ್ಲಿ ಮತದಾರರಿಗೆ ಭಾರಿ ಆಮಿಷವೊಡ್ಡಲಾಗಿದೆ. ಮತಗಟ್ಟೆ ಬಳಿಯೇ ಹಣ ಮತ್ತು ಬೆಳ್ಳಿ ತಟ್ಟೆಗಳನ್ನು ಹಂಚಿಕೆ ಮಾಡಲಾಗಿದ್ದು, ನಂದಿ ಕ್ಷೇತ್ರದಲ್ಲಿ ಮತದಾರರಿಗೆ 8 ಲಕ್ಷ ರೂ.ವರೆಗೂ ಆಮಿಷ ನೀಡಲಾಗಿದೆ. ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕ ಸ್ಥಾನಕ್ಕಾಗಿ ನಡೆಯುತ್ತಿರುವ ಈ ಚುನಾವಣೆಯಲ್ಲಿ ಹಣದ ಹೊಳೆ ಹರಿಯುತ್ತಿದ್ದು, ಟಿವಿ9 ಕ್ಯಾಮರಾ ಇದನ್ನು ಸೆರೆಹಿಡಿದಿದೆ.

ಚಿಕ್ಕಬಳ್ಳಾಪುರ, ಫೆಬ್ರವರಿ 01: ಚಿಮುಲ್ ಚುನಾವಣೆಯಲ್ಲಿ ಮತದಾರರಿಗೆ ಹಣ ಮತ್ತು ಬೆಳ್ಳಿ ತಟ್ಟೆಗಳ ಮೂಲಕ ಭಾರಿ ಆಮಿಷ ಒಡ್ಡಲಾಗಿರು ದೃಶ್ಯಗಳು ಟಿವಿ9 ಕ್ಯಾಮರಾದಲ್ಲಿ ಸೆರೆಯಾಗಿವೆ. ಮತಗಟ್ಟೆಗಳ ಬಳಿಯೇ ಮತದಾರರಿಗೆ ಆಮಿಷ ಒಡ್ಡಲಾಗಿದ್ದು, ಕೈವಾರ ಕ್ಷೇತ್ರದಲ್ಲಿ ಮತದಾರರಿಗೆ ತಲಾ 2 ಲಕ್ಷ ರೂಪಾಯಿ ಹಂಚಿಕೆ ಮಾಡಲಾಗಿದೆ. ಇತ್ತ ನಂದಿ ಕ್ಷೇತ್ರದಲ್ಲಿ ತಲಾ 8 ಲಕ್ಷ ರೂಪಾಯಿಯವರೆಗೂ ಆಮಿಷ ಒಡ್ಡಲಾಗಿದ್ದರೆ, ಒಬ್ಬ ಅಭ್ಯರ್ಥಿ ಮುಕ್ಕಾಲು ಕೆ.ಜಿ. ತೂಕದ ಬೆಳ್ಳಿ ತಟ್ಟೆ ಹಾಗೂ 2 ಲಕ್ಷ ರೂಪಾಯಿ ನಗದು ನೀಡಿದ್ದಾರೆ. ಮತ್ತೊಬ್ಬ ಅಭ್ಯರ್ಥಿ 8 ಲಕ್ಷ ರೂಪಾಯಿ ನಗದು ಮತ್ತು ಬೆಳ್ಳಿ ತಟ್ಟೆ ವಿತರಿಸಿದ್ದಾರೆ. ಕೋಲಾರದಿಂದ ವಿಭಜನೆಯಾದ ನಂತರ ಚಿಕ್ಕಬಳ್ಳಾಪುರ ಜಿಲ್ಲಾ ಹಾಲು ಒಕ್ಕೂಟ ಸಹಕಾರ ಸಂಘಕ್ಕೆ ನಡೆಯುತ್ತಿರುವ ಮೊದಲ ಚುನಾವಣೆ ಇದಾಗಿದೆ. ಒಟ್ಟು 952 ಮತದಾರರು ಇದ್ದು, ಪ್ರತಿಯೊಂದು ಕ್ಷೇತ್ರದಲ್ಲೂ ಲಕ್ಷಗಟ್ಟಲೆ ಹಣದ ಹಂಚಿಕೆ ಆರೋಪ ಕೇಳಿಬಂದಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

 

Published on: Feb 01, 2026 06:07 PM