ಪ್ರಚಾರ ಕಾರ್ಯಕ್ರಮದ ವೇದಿಕೆ ಮೇಲೆ ಹೋಗದೇ ಏಕಾಂಗಿಯಾಗಿ ಕುಳಿತ ಅಭ್ಯರ್ಥಿ ರಕ್ಷಾ ರಾಮಯ್ಯ, ಕಾರಣವೇನು?

| Updated By: ರಮೇಶ್ ಬಿ. ಜವಳಗೇರಾ

Updated on: Apr 18, 2024 | 5:04 PM

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು(ಏಪ್ರಿಲ್ 19) ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ತಮ್ಮ ಪಕ್ಷದ ಅಭ್ಯರ್ಥಿ ರಕ್ಷಾ ರಾಮಯ್ಯ ಪರ ಭರ್ಜರಿ ಮತಬೇಟೆ ನಡೆಸಿದರು. ಈ ವೇಳೆ ಚಿಕ್ಕಬಳ್ಳಾಪುರದ ಬಾಗೇಪಲ್ಲಿಯಲ್ಲಿ ನಡೆದ ಪ್ರಚಾರ ಕಾರ್ಯಕ್ರಮದಲ್ಲಿ ಸಿಎಂ ಭಾಗಿಯಾದರು. ಆದ್ರೆ, ಅಭ್ಯರ್ಥಿ ರಕ್ಷಾ ರಾಮಯ್ಯ ಅವರನ್ನು ವೇದಿಕೆ ಮೇಲೆ ಕರೆದುಕೊಳ್ಳದೇ ಮುಂದೆ ಏಕಾಂಗಿಯಾಗಿ ಕೂಡಿಸಿದ್ದಾರೆ.

ಚಿಕ್ಕಬಳ್ಳಾಪುರ, (ಏಪ್ರಿಲ್ 19): ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಇಂದು(ಏಪ್ರಿಲ್ 18) ಚಿಕ್ಕಬಳ್ಳಾಪುರ ಲೋಕಸಭಾ (Chikkaballapur Loksabha Election) ಕ್ಷೇತ್ರದ ಅಖಾಡಕ್ಕಿಳಿದಿದ್ದು, ತಮ್ಮ ಪಕ್ಷದ ಅಭ್ಯರ್ಥಿ ರಕ್ಷಾ ರಾಮಯ್ಯ (Raksha Ramaiah) ಪರ ಭರ್ಜರಿ ಮತಬೇಟೆ ನಡೆಸಿದರು. ಚಿಕ್ಕಬಳ್ಳಾಪುರ(Chikkaballapur) ವಿಧಾನಸಭಾ ವ್ಯಾಪ್ತಿಯಿಂದಲೇ ಪ್ರಚಾರ ಆರಂಭಿಸಿದ ಸಿದ್ದರಾಮಯ್ಯ, ಭರ್ಜರಿ ರೋಡ್​ ಶೋ ನಡೆಸಿದರು. ಈ ವೇಳೆ ಎನ್​​ಡಿಎ ಅಭ್ಯರ್ಥಿ ಡಾ ಕೆ ಸುಧಾಕರ್ ವಿರುದ್ಧ ವಾಗ್ದಾಳಿ ನಡೆಸಿದರು. ಬಳಿಕ ಚಿಕ್ಕಬಳ್ಳಾಪುರದ ಬಾಗೆಪಲ್ಲಿಯಲ್ಲಿ ಆಯೋಜಿಸಲಾಗಿದ್ದ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಿದರು. ಇನ್ನು ಈ ವೇಳೆ ಕಾರ್ಯಕ್ರಮದ ಖರ್ಚು ವೆಚ್ಚ ಅಭ್ಯರ್ಥಿಯ ಅಕೌಂಟ್ ಸೇರುತ್ತೆ ಎಂದು ನಾಯಕರು ಆತಂಕ ವ್ಯಕ್ತಪಡಿಸಿದ್ದು, ಕೂಡಲೇ ಅಭ್ಯರ್ಥಿ ರಕ್ಷಾ ರಾಮಯ್ಯ ಅವರನ್ನು ಕಾರ್ಯಕ್ರಮದ ವೇದಿಕೆ ಕೆಳಗೆ ಕೂಡಿಸಿರುವ ಪ್ರಸಂಗ ನಡೆದಿದೆ. ಹೌದು… ಸಿದ್ದರಾಮಯ್ಯ ಸೇರಿದಂತೆ ಸಚಿವರು ಮತ್ತು ಜಿಲ್ಲೆಯ ಕಾಂಗ್ರೆಸ್ ನಾಯಕರು ಕಾರ್ಯಕ್ರಮದ ವೇದಿಕೆ ಮೇಲೆ ಕುಳಿತುಕೊಂಡಿದ್ದರೆ, ಅಭ್ಯರ್ಥಿ ರಕ್ಷಾ ರಾಮಯ್ಯ ಮಾತ್ರ ವೇದಿಕೆ ಮುಂಭಾಗದಲ್ಲಿ ಏಕಾಂಗಿ ಕುಳಿತುಕೊಂಡಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Apr 18, 2024 04:58 PM