ಚಿಕ್ಕಬಳ್ಳಾಪುರ: ಬೆಂಗಳೂರು ಹೈದರಾಬಾದ್ ಹೆದ್ದಾರಿಯಲ್ಲಿ ದಟ್ಟವಾದ ಮಂಜು, ವಾಹನ ಸವಾರರು ಹೈರಾಣ

Edited By:

Updated on: Jan 07, 2025 | 10:04 AM

ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಚಳಿಯ ವಾತಾವರಣ ಮುಂದುವರೆದಿದ್ದು ಬೆಂಗಳೂರು ನಗರ, ಗ್ರಾಮಾಂತರ ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ದಟ್ಟವಾದ ಮಂಜು ಕವಿದ ವಾತಾವರಣ ಇದೆ. ಚಿಕ್ಕಬಳ್ಳಾಪುರದಲ್ಲಿ ರಸ್ತೆ ಕಾಣದಷ್ಟು ಮಂಜು ಆವರಿಸಿತ್ತು. ಫಾಗ್​ನಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸವಾರರು ಪರದಾಟ ಪಡುವಂತಾಯಿತು. ವಿಡಿಯೋ ಇಲ್ಲಿದೆ ನೋಡಿ.

ಚಿಕ್ಕಬಳ್ಳಾಪುರ, ಜನವರಿ 7: ಚಿಕ್ಕಬಳ್ಳಾಪುರದಲ್ಲಿ ದಟ್ಟವಾದ ಮಂಜು ಹಾಗೂ ಮೋಡ ಕವಿದ ವಾತವರಣ ಇದ್ದು, ಬೆಂಗಳೂರು ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿಯಲ್ಲಿ ದಟ್ಟವಾದ ಮಂಜು ಕವಿದ ವಾತಾವರಣದಿಂದ ವಾಹನ ಸವಾರರು ರಸ್ತೆ ಕಾಣದೆ ಪರದಾಡಿದರು. ಜಿಲ್ಲೆಯಲ್ಲಿ ಕೊರೆಯುವ ಚಳಿ ಹಾಗೂ ಮಂಜಿನಿಂದ ಜನ ಕಂಗಾಲಾಗಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಮಂಗಳವಾರ ಗರಿಷ್ಠ 26 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ 14 ಡಿಗ್ರಿ ಸೆಲ್ಸಿಯಸ್ ತಾಪಮಾನದ ಮುನ್ಸೂಚನೆ ನೀಡಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Jan 07, 2025 10:01 AM
Follow Us
Bheemappa Patil

ಚಿಕ್ಕಬಳ್ಳಾಪುರ ಎಂಬ ಸುಂದರ ಊರು ನನಗೆ ಸುಂದರವಾದ ಬದುಕನ್ನು ಕಟ್ಟಿಕೊಟ್ಟಿದೆ. 18 ವರ್ಷಗಳಿಂದ ಹಗಲುರಾತ್ರಿ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಜನ ಸೇವೆಯಲ್ಲಿದ್ದೇನೆ. ಶಿಕ್ಷಣವೆಲ್ಲ ಬೆಂಗಳೂರಿನಲ್ಲಿ. ಸರ್ಕಾರಿ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆಯಲ್ಲಿ ಪದವಿ. ಬೆಂಗಳೂರು ವಿವಿಯಲ್ಲಿ ಬಿ.ಸಿ.ಎ ವ್ಯಾಸಂಗ. ವಿದ್ಯಾರ್ಥಿದೆಸೆಯಿಂದಲೆ ಟಿವಿ9 ಕನ್ನಡದಲ್ಲಿ ಕೆಲಸ.

Read More