ಮಳೆ ನಿಂತರೂ ನಿಲ್ಲದ ಅವಾಂತರ: ಸೋರುತ್ತಿದೆ ಬಾಗೇಪಲ್ಲಿಯ ತಹಶೀಲ್ದಾರ್ ಕಚೇರಿ, ದಾಖಲೆಗಳೆಲ್ಲಾ ನೀರುಪಾಲು

Edited By:

Updated on: Oct 17, 2024 | 5:51 PM

ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿಯ ತಾಲೂಕಿನ ತಹಶೀಲ್ದಾರ್ ಕಚೇರಿ ಮಳೆ ನೀರಿನಿಂದ ಸೋರುತ್ತಿದೆ. ಕಚೇರಿ ತುಂಬಾ ನೀರು ನೀರಾಗಿದೆ. ಮಹತ್ವದ ಕಂದಾಯ ದಾಖಲೆಗಳೆಲ್ಲಾ ನೀರುಪಾಲಾಗಿದ್ದು, ಅಧಿಕಾರಿಗಳು ಮಾತ್ರ ಅಸಹಾಯಕರಾಗಿದ್ದಾರೆ. ಕಳೆದ ಎರಡ್ಮೂರು ದಿನಗಳಿಂದ ಕರ್ನಾಟಕದಲ್ಲಿ ಮಳೆ ಆರ್ಭಟಿಸಿತ್ತು. ಇಂದು ಕೊಂಚ ಶಾಂತವಾಗಿದೆ.

ಚಿಕ್ಕಬಳ್ಳಾಪುರ, ಅಕ್ಟೋಬರ್​ 17: ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ನಿರಂತರ ಧಾರಾಕಾರ ಮಳೆ (rain) ಸುರಿಯುತ್ತಿದೆ. ಮಳೆ ನಿಂತರೂ ಮಳೆಯ ಅವಾಂತರಗಳು ನಿಲ್ಲುತ್ತಿಲ್ಲ. ಜಿಲ್ಲೆಯ ಬಾಗೇಪಲ್ಲಿಯ ತಾಲೂಕು ಕಚೇರಿ ಮಳೆಯಿಂದಾಗಿ ಸೋರುತ್ತಿದೆ. ಪರಿಣಾಮ ಮಹತ್ವದ ಕಂದಾಯ ದಾಖಲೆಗಳೆಲ್ಲಾ ನೀರುಪಾಲಾಗಿವೆ. ಕಂದಾಯ ಇಲಾಖೆ ಅಧಿಕಾರಿಗಳು ಅಸಹಾಯಕರಾಗಿದ್ದಾರೆ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. 

Loading...
Unable to load recommendations.
Follow Us
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ

ಚಿಕ್ಕಬಳ್ಳಾಪುರ ಎಂಬ ಸುಂದರ ಊರು ನನಗೆ ಸುಂದರವಾದ ಬದುಕನ್ನು ಕಟ್ಟಿಕೊಟ್ಟಿದೆ. 18 ವರ್ಷಗಳಿಂದ ಹಗಲುರಾತ್ರಿ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಜನ ಸೇವೆಯಲ್ಲಿದ್ದೇನೆ. ಶಿಕ್ಷಣವೆಲ್ಲ ಬೆಂಗಳೂರಿನಲ್ಲಿ. ಸರ್ಕಾರಿ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆಯಲ್ಲಿ ಪದವಿ. ಬೆಂಗಳೂರು ವಿವಿಯಲ್ಲಿ ಬಿ.ಸಿ.ಎ ವ್ಯಾಸಂಗ. ವಿದ್ಯಾರ್ಥಿದೆಸೆಯಿಂದಲೆ ಟಿವಿ9 ಕನ್ನಡದಲ್ಲಿ ಕೆಲಸ.

Read More