ಜಿಲ್ಲೆಯಲ್ಲಿ ರಾತ್ರಿ ಆಲಿಕಲ್ಲು ಸಮೇತ ಸುರಿದ ಮಳೆಗೆ ಅಪಾರ ಪ್ರಮಾಣದ ಹಾನಿಯಾಗಿದೆ. ನಾರಾಯಣಮೂರ್ತಿ ಎಂಬುವವರಿಗೆ ಸೇರಿದ ಲಕ್ಷಾಂತರ ಮೌಲ್ಯದ ದ್ರಾಕ್ಷಿ ಬೆಳೆ ಸಂಪೂರ್ಣ ನೆಲಕಚ್ಚಿದ್ದು, ಅಪಾರ ಪ್ರಮಾಣದ ಬೆಳೆ ಹಾನಿಯಿಂದ ಜಿಲ್ಲೆಯ ರೈತರು ಕಂಗಾಲಾಗಿದ್ದಾರೆ.
ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ರಾತ್ರಿ ಸುರಿದ ಮಳೆಗೆ ಗುಡಿಬಂಡೆ, ಗೌರಿಬಿದನೂರು ತಾಲೂಕಿನ ಹಳ್ಳಗಳಲ್ಲಿ ಅಪಾರ ಪ್ರಮಾಣದ ಹಾನಿಯಾಗಿದೆ. ಗಾಳಿ ಮಳೆಗೆ 10ಕ್ಕೂ ಹೆಚ್ಚು ಮನೆಗಳ ಶೀಟ್ಗಳು ಹಾರಿಹೋಗಿದ್ದು, ಅಪಾರ ಮೌಲ್ಯದ ತರಕಾರಿ ಬೆಳೆಗಳಿಗೆ ಹಾನಿಯಾಗಿದೆ. ಬಿರುಗಾಳಿಗೆ ತೆಂಗು, ಹಲಸಿನ ಮರಗಳು ಧರೆಗುರುಳಿವೆ. ಆಲಿಕಲ್ಲು ಸಮೇತ ಸುರಿದ ಮಳೆಗೆ ನಾರಾಯಣಮೂರ್ತಿ ಎಂಬುವವರಿಗೆ ಸೇರಿದ ಲಕ್ಷಾಂತರ ಮೌಲ್ಯದ ದ್ರಾಕ್ಷಿ ಬೆಳೆ ನಾಶವಾಗಿದೆ. ಅಪಾರ ಪ್ರಮಾಣದ ಬೆಳೆ ಹಾನಿಯಿಂದ ಜಿಲ್ಲೆಯ ರೈತರು ಕಂಗಾಲಾಗಿದ್ದಾರೆ.