ಟಿಪ್ಪು ಸುಲ್ತಾನ್ ಪ್ಯಾಲೇಸ್ ಮೇಲೆ ಕುಖ್ಯಾತ ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯ್ ಹೆಸರು: ಭುಗಿಲೆದ್ದ ಆಕ್ರೋಶ
ಚಿಕ್ಕಬಳ್ಳಾಪುರದ ನಂದಿಬೆಟ್ಟದಲ್ಲಿರುವ ಟಿಪ್ಪು ಸುಲ್ತಾನ್ ಬೇಸಿಗೆ ಅರಮನೆಯ ಮೇಲೆ ಕುಖ್ಯಾತ ಲಾರೆನ್ಸ್ ಬಿಷ್ಣೋಯ್ ಹೆಸರು ಬರೆಯಲಾಗಿದೆ. ಪುರಾತತ್ವ ಇಲಾಖೆ ಅಧೀನದ ಈ ಐತಿಹಾಸಿಕ ಸ್ಮಾರಕಕ್ಕೆ ಮಾಡಿದ ವಿಕೃತಿಯಿಂದ ಟಿಪ್ಪು ಅಭಿಮಾನಿಗಳು ಮತ್ತು ಪ್ರವಾಸಿಗರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಘಟನೆಯು ಸ್ಥಳೀಯರಲ್ಲಿ ಮತ್ತು ಪ್ರವಾಸಿಗರಲ್ಲಿ ಆತಂಕ ಮೂಡಿಸಿದೆ.
ಚಿಕ್ಕಬಳ್ಳಾಪುರ, ಅಕ್ಟೋಬರ್ 27: ಚಿಕ್ಕಬಳ್ಳಾಪುರ ತಾಲೂಕಿನ ನಂದಿಗಿರಿಧಾಮದಲ್ಲಿರುವ ಭಾರತೀಯ ಪುರಾತತ್ವ ಹಾಗೂ ಸರ್ವೇಕ್ಷಣ ಇಲಾಖೆ ಅಧೀನದ ಟಿಪ್ಪು ಸುಲ್ತಾನ್ ಸಮರ್ ಪ್ಯಾಲೇಸ್ ಮೇಲೆ ಕುಖ್ಯಾತ ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯ್ (Lawrence Bishnoi) ಹೆಸರು ಬರೆದು ವಿಕೃತಿ ಮೆರೆಯಲಾಗಿದೆ. ಪ್ಯಾಲೇಸ್ನ ಮೇಲೆ ದೊಡ್ಡದಾಗಿ ಲಾರೆನ್ಸ್ ಬಿಷ್ಣೋಯ್ ಎಂದು ಬರೆಯಲಾಗಿದೆ. ಇದರಿಂದ ಟಿಪ್ಪು ಸುಲ್ತಾನ್ ಅಭಿಮಾನಿಗಳು ಹಾಗೂ ಪ್ರವಾಸಿಗರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Oct 27, 2025 03:04 PM
Latest Videos
ದೇವಸ್ಥಾನದೊಳಗೆ ದೇವರೆದುರು ಕುಳಿತಿದ್ದಾಗಲೇ ಪ್ರಾಣ ಬಿಟ್ಟ ಭಕ್ತ!
ದೆಹಲಿ ಸ್ಫೋಟದ ಶೀಘ್ರ ತನಿಖೆಗೆ ನಿರ್ಧಾರ; ಸಚಿವ ಅಶ್ವಿನಿ ವೈಷ್ಣವ್
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಗಿರಕಿ ಹೊಡೆದ ಆಟೋ: ಎದೆ ಝಲ್ ಎನ್ನುವ ದೃಶ್ಯ
ಬೋಟ್ಸ್ವಾನದೊಂದಿಗಿನ ಸಂಬಂಧ ಗಟ್ಟಿಗೊಳಿಸಲು ಬದ್ಧ; ರಾಷ್ಟ್ರಪತಿ ಮುರ್ಮು

