ಗಂಡ-ಹೆಂಡತಿ ಜಗಳ ಸಾವಿನಲ್ಲಿ ಅಂತ್ಯ; ಅಳಿಯನೇ ಮಗಳನ್ನು ಸಾಯಿಸಿದ್ದಾನೆಂದ ಕುಟುಂಬಸ್ಥರು!
ಜಿಲ್ಲೆಯ ಆರ್. ಚೊಕ್ಕನಹಳ್ಳಿ ಗ್ರಾಮದಲ್ಲಿ ವರಲಕ್ಷ್ಮಿ (25) ಎಂಬ ಯುವತಿಯ ಅನುಮಾನಾಸ್ಪದ ಸಾವು ಪ್ರಕರಣ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಪ್ರೇಮಿಗಳ ನಡುವೆ ಮಧ್ಯಸ್ಥಿಕೆ ವಹಿಸಬೇಡಿ ಎಂದು ಗಂಡ ಗಂಗರಾಜು ಬುದ್ದಿವಾದ ಹೇಳಿದ ಹಿನ್ನೆಲೆ ಗಂಡ-ಹೆಂಡತಿಯ ನಡುವೆ ಗಲಾಟೆ ನಡೆದಿದ್ದಾಗಿ ತಿಳಿದುಬಂದಿದೆ. ವರಲಕ್ಷ್ಮಿ ಸ್ನೇಹಿತೆ ಶ್ರಾವಣಿಯ ಪ್ರಿಯಕರ ವರಲಕ್ಷ್ಮಿಗೆ ಕರೆ ಮಾಡಿದ್ದು, ಅದನ್ನು ಗಂಗರಾಜು ಸ್ವೀಕರಿಸಿದ್ದರಿಂದ ಜಗಳ ಉಂಟಾಗಿತ್ತು ಎನ್ನಲಾಗಿದೆ. ನಂತರ ವರಲಕ್ಷ್ಮಿ ಗಂಡನ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಪತ್ನಿಯನ್ನು ಹೊಡೆದು ಬಳಿಕ ನೇಣು ಹಾಕಿದ್ದಾರೆ ಎಂದು ಮೃತಳ ತವರು ಮನೆಯವರು ಗಂಗರಾಜು ಹಾಗೂ ಅವನ ತಂದೆ-ತಾಯಿಯ ವಿರುದ್ಧ ಕೊಲೆ ಆರೋಪ ಮಾಡಿದ್ದಾರೆ. ಇದೇ ವೇಳೆ ಶವವನ್ನು ಸಕಾಲಕ್ಕೆ ತೋರಿಸಲಿಲ್ಲ ಎಂದು ಆರೋಪಿಸಿ ಪೆರೇಸಂದ್ರ ಪೊಲೀಸರು ಹಾಗೂ ಗುಡಿಬಂಡೆ ತಾಲೂಕು ಆಸ್ಪತ್ರೆ ವಿರುದ್ಧ ಮೃತಳ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಚಿಕ್ಕಬಳ್ಳಾಪುರ, ಮಾರ್ಚ್ 09: ಜಿಲ್ಲೆಯ ಆರ್. ಚೊಕ್ಕನಹಳ್ಳಿ ಗ್ರಾಮದಲ್ಲಿ ವರಲಕ್ಷ್ಮಿ (25) ಎಂಬ ಯುವತಿಯ ಅನುಮಾನಾಸ್ಪದ ಸಾವು ಪ್ರಕರಣ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಪ್ರೇಮಿಗಳ ನಡುವೆ ಮಧ್ಯಸ್ಥಿಕೆ ವಹಿಸಬೇಡಿ ಎಂದು ಗಂಡ ಗಂಗರಾಜು ಬುದ್ದಿವಾದ ಹೇಳಿದ ಹಿನ್ನೆಲೆ ಗಂಡ-ಹೆಂಡತಿಯ ನಡುವೆ ಗಲಾಟೆ ನಡೆದಿದ್ದಾಗಿ ತಿಳಿದುಬಂದಿದೆ. ವರಲಕ್ಷ್ಮಿ ಸ್ನೇಹಿತೆ ಶ್ರಾವಣಿಯ ಪ್ರಿಯಕರ ವರಲಕ್ಷ್ಮಿಗೆ ಕರೆ ಮಾಡಿದ್ದು, ಅದನ್ನು ಗಂಗರಾಜು ಸ್ವೀಕರಿಸಿದ್ದರಿಂದ ಜಗಳ ಉಂಟಾಗಿತ್ತು ಎನ್ನಲಾಗಿದೆ. ನಂತರ ವರಲಕ್ಷ್ಮಿ ಗಂಡನ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಪತ್ನಿಯನ್ನು ಹೊಡೆದು ಬಳಿಕ ನೇಣು ಹಾಕಿದ್ದಾರೆ ಎಂದು ಮೃತಳ ತವರು ಮನೆಯವರು ಗಂಗರಾಜು ಹಾಗೂ ಅವನ ತಂದೆ-ತಾಯಿಯ ವಿರುದ್ಧ ಕೊಲೆ ಆರೋಪ ಮಾಡಿದ್ದಾರೆ. ಇದೇ ವೇಳೆ ಶವವನ್ನು ಸಕಾಲಕ್ಕೆ ತೋರಿಸಲಿಲ್ಲ ಎಂದು ಆರೋಪಿಸಿ ಪೆರೇಸಂದ್ರ ಪೊಲೀಸರು ಹಾಗೂ ಗುಡಿಬಂಡೆ ತಾಲೂಕು ಆಸ್ಪತ್ರೆ ವಿರುದ್ಧ ಮೃತಳ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

