AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಕ್ತಿ ಯೋಜನೆ ಉದ್ಗಾಟನೆಗೂ ಮುನ್ನವೇ ಬ್ಯಾನರ್ ತೆರವು: ಶಾಸಕ ಪ್ರದೀಪ್ ಈಶ್ವರ್​ ರೂಲ್ಸ್ ಪಾಲಿಸಿದ ಅಧಿಕಾರಿಗಳು

ಶಕ್ತಿ ಯೋಜನೆ ಉದ್ಗಾಟನೆಗೂ ಮುನ್ನವೇ ಬ್ಯಾನರ್ ತೆರವು: ಶಾಸಕ ಪ್ರದೀಪ್ ಈಶ್ವರ್​ ರೂಲ್ಸ್ ಪಾಲಿಸಿದ ಅಧಿಕಾರಿಗಳು

ರಮೇಶ್ ಬಿ. ಜವಳಗೇರಾ
|

Updated on: Jun 11, 2023 | 5:02 PM

Share

ಮಹಿಳೆಯರಿಗೆ ಉಚಿತ ಪ್ರಯಾಣದ ಶಕ್ತಿ ಯೋಜನೆ ಉದ್ಘಾಟನೆಗೂ ಮುನ್ನವೇ ಬ್ಯಾನರ್​ಗಳನ್ನು ತೆರವುಗೊಳಿಸಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.

ಚಿಕ್ಕಬಳ್ಳಾಪುರ: ಮಹಿಳೆಯರಿಗೆ ಉಚಿತ ಪ್ರಯಾಣದ ಶಕ್ತಿ ಯೋಜನೆ ಉದ್ಘಾಟನೆಗೂ ಮುನ್ನವೇ ಬ್ಯಾನರ್​ಗಳನ್ನು ತೆರವುಗೊಳಿಸಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ಸ್ವಾಗತ ಕೋರಿ ಕಾಂಗ್ರೆಸ್ ಮುಖಂಡರು ಬ್ಯಾನರ್​ ಅಳವಡಿಸಿದ್ದರು. ಆದ್ರೆ,  ಕಾರ್ಯಕ್ರಮ ಆರಂಭಕ್ಕೂ ಮುನ್ನವೇ ನಗರಸಭೆ ಅಧಿಕಾರಿಗಳು ಬ್ಯಾನರ್ ತೆರವು ಮಾಡಿದ್ದಾರೆ. ಕಳೆದ ಕೆಲ ದಿನಗಳ ಹಿಂದಷ್ಟೇ ಬ್ಯಾನರ್​​ಗಳ ತೆರವಿಗೆ ಎಂಎಲ್​ಎ ಪ್ರದೀಪ್​ ಈಶ್ವರ್ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದರು. ಇದರಿಂದ ಎಚ್ಚೆತ್ತುಕೊಂಡ ನಗರಸಭೆ ಅಧಿಕಾರಿಗಳು ಬ್ಯಾನರ್ ತೆರವು ಮಾಡಿದರು. ಇದರಿಂದ ಕಾಂಗ್ರೆಸ್​ ಕಾರ್ಯಕರ್ತರು ಅಸಮಧಾನಗೊಂಡರು.

Follow Us
ರಮೇಶ್ ಬಿ. ಜವಳಗೇರಾ
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More