ಶಕ್ತಿ ಯೋಜನೆ ಉದ್ಗಾಟನೆಗೂ ಮುನ್ನವೇ ಬ್ಯಾನರ್ ತೆರವು: ಶಾಸಕ ಪ್ರದೀಪ್ ಈಶ್ವರ್ ರೂಲ್ಸ್ ಪಾಲಿಸಿದ ಅಧಿಕಾರಿಗಳು
ಮಹಿಳೆಯರಿಗೆ ಉಚಿತ ಪ್ರಯಾಣದ ಶಕ್ತಿ ಯೋಜನೆ ಉದ್ಘಾಟನೆಗೂ ಮುನ್ನವೇ ಬ್ಯಾನರ್ಗಳನ್ನು ತೆರವುಗೊಳಿಸಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.
ಚಿಕ್ಕಬಳ್ಳಾಪುರ: ಮಹಿಳೆಯರಿಗೆ ಉಚಿತ ಪ್ರಯಾಣದ ಶಕ್ತಿ ಯೋಜನೆ ಉದ್ಘಾಟನೆಗೂ ಮುನ್ನವೇ ಬ್ಯಾನರ್ಗಳನ್ನು ತೆರವುಗೊಳಿಸಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ಸ್ವಾಗತ ಕೋರಿ ಕಾಂಗ್ರೆಸ್ ಮುಖಂಡರು ಬ್ಯಾನರ್ ಅಳವಡಿಸಿದ್ದರು. ಆದ್ರೆ, ಕಾರ್ಯಕ್ರಮ ಆರಂಭಕ್ಕೂ ಮುನ್ನವೇ ನಗರಸಭೆ ಅಧಿಕಾರಿಗಳು ಬ್ಯಾನರ್ ತೆರವು ಮಾಡಿದ್ದಾರೆ. ಕಳೆದ ಕೆಲ ದಿನಗಳ ಹಿಂದಷ್ಟೇ ಬ್ಯಾನರ್ಗಳ ತೆರವಿಗೆ ಎಂಎಲ್ಎ ಪ್ರದೀಪ್ ಈಶ್ವರ್ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದರು. ಇದರಿಂದ ಎಚ್ಚೆತ್ತುಕೊಂಡ ನಗರಸಭೆ ಅಧಿಕಾರಿಗಳು ಬ್ಯಾನರ್ ತೆರವು ಮಾಡಿದರು. ಇದರಿಂದ ಕಾಂಗ್ರೆಸ್ ಕಾರ್ಯಕರ್ತರು ಅಸಮಧಾನಗೊಂಡರು.