ವೀಕೆಂಡ್​ ಹಿನ್ನೆಲೆ ನಂದಿಗಿರಿಧಾಮಕ್ಕೆ ಹರಿದು ಬಂದ ಜನ ಸಾಗರ: ನಡುರಸ್ತೆಯಲ್ಲೇ ನಿಂತ ವಾಹನಗಳು

ವೀಕೆಂಡ್​ ಹಿನ್ನೆಲೆ ನಂದಿಗಿರಿಧಾಮಕ್ಕೆ ಹರಿದು ಬಂದ ಜನ ಸಾಗರ: ನಡುರಸ್ತೆಯಲ್ಲೇ ನಿಂತ ವಾಹನಗಳು

ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Updated By: ಗಂಗಾಧರ​ ಬ. ಸಾಬೋಜಿ

Updated on: Oct 12, 2024 | 3:41 PM

ಚಿಕ್ಕಬಳ್ಳಾಪುರ ತಾಲೂಕಿನ ನಂದಿಗಿರಿಧಾಮಕ್ಕೆ ಇಂದು ಸಾಕಷ್ಟು ಜನರು ಲಗ್ಗೆಯಿಟ್ಟಿದ್ದಾರೆ. ರಜೆ ಹಿನ್ನೆಲೆ ನಂದಿಗಿರಿಧಾಮಕ್ಕೆ ಜನ ಸಾಗರವೇ ಹರಿದು ಬಂದಿದೆ. ಪರಿಣಾಮ ಸಂಪೂರ್ಣ ಟ್ರಾಫಿಕ್ ಜಾಮ್ ಉಂಟಾಗಿದೆ. ಹೀಗಾಗಿ ನಂದಿಬೆಟ್ಟದ ಮಧ್ಯೆಯೇ ಸಿಲುಕಿ ಪ್ರವಾಸಿಗರು ಪರದಾಡುವಂತಾಗಿದೆ.

ಚಿಕ್ಕಬಳ್ಳಾಪುರ, ಅಕ್ಟೋಬರ್​​ 12: ರಜೆ ಹಿನ್ನೆಲೆ ಚಿಕ್ಕಬಳ್ಳಾಪುರ ತಾಲೂಕಿನ ನಂದಿಗಿರಿಧಾಮಕ್ಕೆ (Nandi Giridhama) ಇಂದು ಜನ ಸಾಗರ ಹರಿದು ಬಂದಿದೆ. ನಂದಿಗಿರಿಧಾಮದ ರಸ್ತೆಯಲ್ಲಿ ಸಂಪೂರ್ಣ ಟ್ರಾಫಿಕ್ ಜಾಮ್ ಉಂಟಾಗಿದೆ. ಹೀಗಾಗಿ ನಂದಿಬೆಟ್ಟದ ಮಧ್ಯೆಯೇ ಸಿಲುಕಿ ಪ್ರವಾಸಿಗರು ಪರದಾಡಿದ್ದಾರೆ. ನಂದಿಗಿರಿಧಾಮದ ಮೇಲೆ ಪಾರ್ಕಿಂಗ್  ಇಲ್ಲದೆ ಸಾಕಷ್ಟು ವಾಹನಗಳು ರಸ್ತೆಯಲ್ಲಿ ನಿಂತುಕೊಂಡಿವೆ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.