ಚಿಕ್ಕಬಳ್ಳಾಪುರ: ಲಿಂಗಶೆಟ್ಟಿಪುರ ಗೇಟ್ ಬಳಿ 2 ವರ್ಷದಲ್ಲಿ 30 ಮಂದಿಯನ್ನು ಬಲಿ ಪಡೆದ ಸಾವಿನ ಹೆದ್ದಾರಿ

Edited By:

Updated on: Aug 19, 2026 | 9:37 AM

ಚಿಕ್ಕಬಳ್ಳಾಪುರ ತಾಲೂಕಿನ ಲಿಂಗಶೆಟ್ಟಿಪುರ ಗೇಟ್ ಬಳಿ ಇರುವ ‘ರಾಷ್ಟ್ರೀಯ ಹೆದ್ದಾರಿ 44’ ಸಾವಿನ ತಾಣವಾಗಿದೆ. ಕಳೆದ ಎರಡು ವರ್ಷಗಳಲ್ಲಿ 30ಕ್ಕೂ ಹೆಚ್ಚು ಮಂದಿ ಇಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ಇತ್ತೀಚೆಗೆ ನಡೆದ ಅಪಘಾತದಲ್ಲಿ ಉತ್ತರ ಭಾರತದ ಜೋಡಿ ಸಾವನ್ನಪ್ಪಿದ ನಂತರ, ಸ್ಥಳೀಯರು ಪ್ರತಿಭಟನೆ ನಡೆಸಿದ್ದಾರೆ. ಅಧಿಕಾರಿಗಳು ತಾತ್ಕಾಲಿಕವಾಗಿ ಸಂಚಾರ ಮಾರ್ಗ ಬದಲಾವಣೆ ಮಾಡಿದ್ದಾರೆ.

ಚಿಕ್ಕಬಳ್ಳಾಪುರ, ಆಗಸ್ಟ್ 19: ಚಿಕ್ಕಬಳ್ಳಾಪುರ ತಾಲೂಕಿನ ಲಿಂಗಶೆಟ್ಟಿಪುರ ಗೇಟ್ ಬಳಿ ಹಾದುಹೋಗುವ ಬೆಂಗಳೂರು-ಹೈದರಾಬಾದ್ ‘ರಾಷ್ಟ್ರೀಯ ಹೆದ್ದಾರಿ 44’, ಸಾವಿನ ತಾಣ ಅಥವಾ ಬ್ಲಾಕ್ ಸ್ಪಾಟ್ ಎಂದು ಗುರುತಿಸಿಕೊಂಡಿದೆ. ಕಳೆದ ಎರಡು ವರ್ಷಗಳಲ್ಲಿ ಈ ಸ್ಥಳದಲ್ಲಿ 30ಕ್ಕೂ ಹೆಚ್ಚು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಇತ್ತೀಚೆಗೆ ಇಶಾ ಫೌಂಡೇಶನ್​ನಿಂದ ಬೆಂಗಳೂರಿಗೆ ಹಿಂದಿರುಗುತ್ತಿದ್ದ ಉತ್ತರ ಭಾರತದ ದಂಪತಿಗಳಿಬ್ಬರು ಬೈಕ್‌ನಲ್ಲಿ ತೆರಳುತ್ತಿದ್ದಾಗ ಟ್ರಕ್‌ಗೆ ಡಿಕ್ಕಿ ಹೊಡೆದು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿತ್ತು.

ಈ ಘಟನೆಯ ಹಿನ್ನೆಲೆಯಲ್ಲಿ ಸ್ಥಳೀಯರು ಅಧಿಕಾರಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿ, ರಸ್ತೆ ಸುರಕ್ಷತಾ ಕ್ರಮಗಳ ಕೊರತೆಯನ್ನು ಪ್ರಶ್ನಿಸಿ ಪ್ರತಿಭಟನೆ ನಡೆಸಿದರು. ಸ್ಥಳದಲ್ಲಿ ಯಾವುದೇ ಹಂಪ್‌ಗಳು, ಸೂಚನಾ ಫಲಕಗಳು ಇಲ್ಲದಿರುವುದು ಪದೇಪದೇ ಅಪಘಾತಗಳಿಗೆ ಕಾರಣವಾಗುತ್ತಿದೆ ಎಂದು ದೂರಿದರು. ಪ್ರತಿಭಟನೆಯ ನಂತರ, ಆರ್‌ಟಿಓ, ಪಿಡಬ್ಲ್ಯೂಡಿ, ಎನ್‌ಹೆಚ್‌ಎಐ ಮತ್ತು ಚಿಕ್ಕಬಳ್ಳಾಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪ್ರಯಾಣಿಕರ ಸುರಕ್ಷತೆಗಾಗಿ ಅಧಿಕಾರಿಗಳು ತಾತ್ಕಾಲಿಕವಾಗಿ ಹೊಸ ಸಂಚಾರ ವ್ಯವಸ್ಥೆಯನ್ನು ಜಾರಿಗೊಳಿಸಿದ್ದಾರೆ. ಇಶಾ ಫೌಂಡೇಶನ್‌ನಿಂದ ಬೆಂಗಳೂರಿಗೆ ಹಿಂದಿರುಗುವವರು ನೇರವಾಗಿ ಹೆದ್ದಾರಿಗೆ ಪ್ರವೇಶಿಸುವ ಬದಲು, ಎಡಕ್ಕೆ ತಿರುಗಿ ಸೇಟ್ದಿನ್ನೆ ಬಳಿಯ ಫ್ಲೈಓವರ್ ಕೆಳಗೆ ಯು-ಟರ್ನ್ ಮಾಡಿಕೊಂಡು ಬೆಂಗಳೂರಿನತ್ತ ಸಾಗುವಂತೆ ಬ್ಯಾರಿಕೇಡ್‌ಗಳನ್ನು ಅಳವಡಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us