ಚಿಕ್ಕಬಳ್ಳಾಪುರ: ಆಲೂಗಡ್ಡೆ ದರ ಪಾತಾಳಕ್ಕೆ ಕುಸಿತ, ಬೇಡಿಕೆಯೂ ಇಲ್ಲ! ರೈತರ ಗೋಳು ಕೇಳೋರಿಲ್ಲ

Edited By:

Updated on: Apr 04, 2026 | 12:01 PM

ಗಲ್ಫ್ ರಾಷ್ಟ್ರಗಳ ಸಂಘರ್ಷದಿಂದ ವಾಣಿಜ್ಯ ಸಿಲಿಂಡರ್‌ಗಳ ಅಭಾವ ತಲೆದೋರಿದ್ದು, ಹೋಟೆಲ್‌ಗಳು ಬಂದಾಗಿವೆ. ಇದರಿಂದ ಚಿಕ್ಕಬಳ್ಳಾಪುರದಲ್ಲಿ ಬೆಳೆದ ಆಲೂಗಡ್ಡೆಗೆ ಬೆಲೆ ಸಿಗದೆ ರೈತರು ತೀವ್ರ ನಷ್ಟ ಅನುಭವಿಸುತ್ತಿದ್ದಾರೆ. ಹಗಲಿರುಳು ಕಷ್ಟಪಟ್ಟು ಬೆಳೆದ ಬೆಳೆಯನ್ನು ಕಡಿಮೆ ಬೆಲೆಗೆ ಮಾರಾಟ ಮಾಡುವ ಅಥವಾ ಹೊಲದಲ್ಲಿಯೇ ಕೊಳೆಸುವ ದುಃಸ್ಥಿತಿ ಎದುರಾಗಿದೆ.

ಚಿಕ್ಕಬಳ್ಳಾಪುರ, ಏಪ್ರಿಲ್ 4: ಗಲ್ಫ್ ರಾಷ್ಟ್ರಗಳಲ್ಲಿನ ಯುದ್ಧದ ಕಾರಣದಿಂದ ವಾಣಿಜ್ಯ ಗ್ಯಾಸ್ ಸಿಲಿಂಡರ್‌ಗಳ ಅಭಾವ ಉಂಟಾಗಿ, ಬಹುತೇಕ ದೊಡ್ಡ ಹೋಟೆಲ್‌ಗಳು ಕಾರ್ಯನಿರ್ವಹಿಸುತ್ತಿಲ್ಲ. ಈ ಪರಿಸ್ಥಿತಿಯು ಚಿಕ್ಕಬಳ್ಳಾಪುರ ಜಿಲ್ಲೆಯ ಆಲೂಗಡ್ಡೆ ಬೆಳೆಗಾರರಿಗೆ ತೀವ್ರ ಸಂಕಷ್ಟ ತಂದೊಡ್ಡಿದೆ. ರೈತರು ಮಗುವಿನಂತೆ ಆರೈಕೆ ಮಾಡಿ ಬೆಳೆದ ಆಲೂಗಡ್ಡೆಗೆ ಉತ್ತಮ ಬೆಲೆ ಸಿಗದೆ ಪರದಾಡುತ್ತಿದ್ದಾರೆ. ಕಳೆದ ಹದಿನೈದು ದಿನಗಳಿಂದ ಕೊಯ್ಲು ಮಾಡಿದ ಆಲೂಗಡ್ಡೆಯನ್ನು ಸಂಗ್ರಹಿಸಿಟ್ಟರೂ, ಮಾರುಕಟ್ಟೆಯಲ್ಲಿ ಬೇಡಿಕೆ ಇಲ್ಲದೆ ಮತ್ತು ಹೋಟೆಲ್‌ಗಳು ತೆರೆಯದ ಕಾರಣ ಮಾರಾಟವಾಗುತ್ತಿಲ್ಲ. ಚಿಕ್ಕಬಳ್ಳಾಪುರದ ಎಪಿಎಂಸಿ ಮಾರುಕಟ್ಟೆಯಲ್ಲಿ, ಅತ್ಯುತ್ತಮ ಗುಣಮಟ್ಟದ ಆಲೂಗಡ್ಡೆ (52 ಕೆ.ಜಿ. ಮೂಟೆ) ಕೇವಲ 300 ರೂಪಾಯಿಗೆ ಮಾರಾಟವಾಗುತ್ತಿದ್ದು, ಕಳಪೆ ಗುಣಮಟ್ಟದ ಆಲೂಗಡ್ಡೆಗೆ 20 ರಿಂದ 50 ರೂಪಾಯಿ ಮಾತ್ರ ಸಿಗುತ್ತಿದೆ. ಇದರಿಂದ ರೈತರಿಗೆ ಅಪಾರ ಪ್ರಮಾಣದ ನಷ್ಟ ಉಂಟಾಗಿದ್ದು, ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಎಂಬಂತಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ

ಚಿಕ್ಕಬಳ್ಳಾಪುರ ಎಂಬ ಸುಂದರ ಊರು ನನಗೆ ಸುಂದರವಾದ ಬದುಕನ್ನು ಕಟ್ಟಿಕೊಟ್ಟಿದೆ. 18 ವರ್ಷಗಳಿಂದ ಹಗಲುರಾತ್ರಿ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಜನ ಸೇವೆಯಲ್ಲಿದ್ದೇನೆ. ಶಿಕ್ಷಣವೆಲ್ಲ ಬೆಂಗಳೂರಿನಲ್ಲಿ. ಸರ್ಕಾರಿ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆಯಲ್ಲಿ ಪದವಿ. ಬೆಂಗಳೂರು ವಿವಿಯಲ್ಲಿ ಬಿ.ಸಿ.ಎ ವ್ಯಾಸಂಗ. ವಿದ್ಯಾರ್ಥಿದೆಸೆಯಿಂದಲೆ ಟಿವಿ9 ಕನ್ನಡದಲ್ಲಿ ಕೆಲಸ.

Read More