ಮಳೆಗೆ ಕೆಸರು ಗದ್ದೆಯಂತಾದ ಶಿಡ್ಲಘಟ್ಟದ ರಸ್ತೆ: ಜನರ ಪರದಾಟ

Updated on: Sep 30, 2026 | 7:44 AM

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟದಲ್ಲಿ ಮಳೆಯಿಂದ ರಸ್ತೆಗಳು ಕೆಸರು ಗದ್ದೆಯಂತಾಗಿದ್ದು, ವಾಹನ ಸವಾರರು ಹಾಗೂ ಸ್ಥಳೀಯರು ಪರದಾಡುವಂತಾಗಿದೆ. ರಾಜೀವ್ ಗಾಂಧಿ ಬಡಾವಣೆಯ 27ನೇ ವಾರ್ಡ್‌ನಲ್ಲಿ ರಸ್ತೆ ದುಸ್ಥಿತಿಯಿಂದ ಕೆಲ ಬೈಕ್ ಸವಾರರು ಬಿದ್ದು ಗಾಯಗೊಂಡಿದ್ದಾರೆ. ಕುಡಿಯುವ ನೀರು ಮತ್ತು ಚರಂಡಿ ಸ್ವಚ್ಛತೆ ಸಮಸ್ಯೆಯೂ ಇದ್ದು, ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಸ್ಪಂದಿಸಬೇಕು ಎಂದು ನಿವಾಸಿಗಳು ಆಗ್ರಹಿಸಿದ್ದಾರೆ.

ಚಿಕ್ಕಬಳ್ಳಾಪುರ, ಸೆಪ್ಟೆಂಬರ್ 30: ಚಿಕ್ಕಬಳ್ಳಾಪುರ ಜಿಲ್ಲೆಯ ಹಲವೆಡೆ ಕಳೆದ ಮೂರ್ನಾಲ್ಕು ದಿನಗಳಿಂದ ಭರ್ಜರಿ ಮಳೆಯಾಗುತ್ತಿದೆ. ಮಳೆ ಬಂದಿರುವುದಕ್ಕೆ ಒಂದೆಡೆ ಸಂತಸವಾದರೆ, ಮತ್ತೊಂದೆಡೆ ರಸ್ತೆಗಳು ಕೆಸರು ಗದ್ದೆಯಂತಾಗಿ ಜನರು ಪರದಾಡುವಂತಾಗಿದೆ. ಶಿಡ್ಲಘಟ್ಟ ನಗರಸಭೆ ವ್ಯಾಪ್ತಿಯ 27ನೇ ವಾರ್ಡ್‌ನ ರಾಜೀವ್ ಗಾಂಧಿ ಬಡಾವಣೆಯ ರಸ್ತೆಗಳ ಸ್ಥಿತಿ ಮಳೆಯಿಂದ ಸಂಪೂರ್ಣ ಹದಗೆಟ್ಟಿದೆ. ರಸ್ತೆಯಲ್ಲಿ ಕೆಸರು ತುಂಬಿಕೊಂಡಿದ್ದು, ವಾಹನ ಸವಾರರು ಹಾಗೂ ಸ್ಥಳೀಯ ನಿವಾಸಿಗಳು ಓಡಾಡಲು ಪರದಾಡುವಂತಾಗಿದೆ. ಮಳೆ ಬಂದಾಗ ಈ ರಸ್ತೆಯಲ್ಲಿ ಸಂಚರಿಸುವುದೇ ಕಷ್ಟವಾಗಿದ್ದು, ಕೆಲ ಬೈಕ್ ಸವಾರರು ಕೆಸರು ಮಣ್ಣಿನಲ್ಲಿ ಸಿಲುಕಿ ಬಿದ್ದು ಗಾಯಗೊಂಡಿದ್ದಾರೆ.

ಇನ್ನು ಬಡಾವಣೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯೂ ಇದ್ದು, ಚರಂಡಿಗಳ ಸ್ವಚ್ಛತೆ ಕೂಡ ನಡೆಯುತ್ತಿಲ್ಲ ಎಂಬುದು ಸ್ಥಳೀಯರ ಅಳಲು. ಈ ಸಮಸ್ಯೆಗಳ ಬಗ್ಗೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳಿಗೆ ಮಾಹಿತಿ ನೀಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ನಿವಾಸಿಗಳು ದೂರಿದ್ದಾರೆ.

ವರದಿ: ಮನೋಹರ ವಿ, ಟಿವಿ9

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More