AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜನಿವಾರ ಕತ್ತರಿಸಿ ಕಸದ ಬುಟ್ಟಿಗೆ ಹಾಕಿದ್ರು: ಅಳಲು ತೋಡಿಕೊಂಡ ವಿದ್ಯಾರ್ಥಿ

ಜನಿವಾರ ಕತ್ತರಿಸಿ ಕಸದ ಬುಟ್ಟಿಗೆ ಹಾಕಿದ್ರು: ಅಳಲು ತೋಡಿಕೊಂಡ ವಿದ್ಯಾರ್ಥಿ

ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on: Apr 25, 2026 | 1:27 PM

Share

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಬಹಳ ಸ್ಪಷ್ಟವಾಗಿ ವಸ್ತ್ರ, ಸಂಹಿತೆಯ ಬಗ್ಗೆ ವಿವರಿಸಿದೆ. ಆದರೂ ಸಹ ಮೊನ್ನೆ ನಡೆದ ಸಿಇಟಿ ಪರೀಕ್ಷೆ ವೇಳೆ ಅಭ್ಯರ್ಥಿಗಳ ಜನಿವಾರಕ್ಕೆ ಕತ್ತರಿ ಹಾಕಿರುವುದು ಭಾರೀ ಆಕ್ರೋಶಕ್ಕೆ ಕಾರಣವಾಗಿದ್ದು, ಈ ಸಂಬಂಧ ಕೆಲವರನ್ನು ಅಮಾನತು ಸಹ ಮಾಡಲಾಗಿದೆ. ಇಂತಹ ಘಟನೆ ನಡೆದಿರುವುದು ಉದ್ದೇಶ ಪೂರ್ವಕವಾಗಿ ಮಾಡಿದಂತೆ ಮೇಲ್ನೋಟಕ್ಕೆ ಕಂಡುಬಂದಿದೆ. ಹೀಗಾಗಿ ವಿದ್ಯಾರ್ಥಿಗಳ ಜನಿವಾರ ತೆಗೆಸಿರುವ ಪ್ರಕರಣದ ತನಿಖೆಗಾಗಿ ತಂಡ ರಚಿಸಲಾಗಿದೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಚಿಕ್ಕಬಳ್ಳಾಪುರ, (ಏಪ್ರಿಲ್ 25): ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಬಹಳ ಸ್ಪಷ್ಟವಾಗಿ ವಸ್ತ್ರ, ಸಂಹಿತೆಯ ಬಗ್ಗೆ ವಿವರಿಸಿದೆ. ಆದರೂ ಸಹ ಮೊನ್ನೆ ನಡೆದ ಸಿಇಟಿ ಪರೀಕ್ಷೆ ವೇಳೆ ಅಭ್ಯರ್ಥಿಗಳ ಜನಿವಾರಕ್ಕೆ ಕತ್ತರಿ ಹಾಕಿರುವುದು ಭಾರೀ ಆಕ್ರೋಶಕ್ಕೆ ಕಾರಣವಾಗಿದ್ದು, ಈ ಸಂಬಂಧ ಕೆಲವರನ್ನು ಅಮಾನತು ಸಹ ಮಾಡಲಾಗಿದೆ. ಇಂತಹ ಘಟನೆ ನಡೆದಿರುವುದು ಉದ್ದೇಶ ಪೂರ್ವಕವಾಗಿ ಮಾಡಿದಂತೆ ಮೇಲ್ನೋಟಕ್ಕೆ ಕಂಡುಬಂದಿದೆ. ಹೀಗಾಗಿ ವಿದ್ಯಾರ್ಥಿಗಳ ಜನಿವಾರ ತೆಗೆಸಿರುವ ಪ್ರಕರಣದ ತನಿಖೆಗಾಗಿ ತಂಡ ರಚಿಸಲಾಗಿದೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಇನ್ನು ಜನಿವಾರ ಕತ್ತರಿಸಿದ ಬಗ್ಗೆ ಚಿಕ್ಕಬಳ್ಳಾಪುರದ ವಿದ್ಯಾರ್ಥಿ ಸುಪ್ರೀತ್ ಕೆ.ಆರ್. ಟಿವಿ9ಗೆ ಪ್ರತಿಕ್ರಿಯಿಸಿದ್ದು, ನಾನೆ ತೆಗೆದು ಇಟ್ಟುಕೊಳ್ಳುತ್ತೇನೆಂದು ಹೇಳಿದರೂ ಕೇಳಲಿಲ್ಲ. ಜನಿವಾರ ತೆಗೆಯುವುದಕ್ಕೂ ಅವಕಾಶ ನೀಡಲಿಲ್ಲ. ಕತ್ತರಿಯಿಂದ ಜನಿವಾರ ಕತ್ತರಿಸಿ ಕಸದ ಬುಟ್ಟಿಗೆ ಹಾಕಿದ್ರು. ಪರೀಕ್ಷೆ ಮುಗಿದ ಮೇಲೆ ಕಸದ ಬುಟ್ಟಿಯಲ್ಲಿ ಜನಿವಾರ ಹುಡುಕಾಡಿ ತಂದೆ. 8 ದಿನಗಳ ಹಿಂದೆ ಉಪನಯನವಾಗಿತ್ತು. ಜನಿವಾರ ಕಿತ್ತಾಕಿದ ಕಾರಣ ಒತ್ತಡಕ್ಕೆ ಒಳಗಾಗಿ ಪರೀಕ್ಷೆ ಸರಿಯಾಗಿ ಬರೆಯಲಿಲ್ಲ. ಪಿ.ಸಿ.ಎಂ.ಬಿ ಯಲ್ಲಿ 90 ಶೇ. ತೆಗೆದಿದ್ದೇನೆ. ನಮ್ಮ ತಂದೆ ಮೃತಪಟ್ಟು ಒಂದು ವರ್ಷ ಆಗಿದೆ. ತಾಯಿ ಆಸೆ ಹಿಡೇರಿಸಲು ಚನ್ನಾಗಿ ಅಧ್ಯಾಯನ ಮಾಡಿದ್ದೆ. ನಮಗೆ ಮೊದಲೆ ಹೇಳಿರಲಿಲ್ಲ. ನಿಯಮಾವಳಿಯಲ್ಲೂ ಜನಿವಾರ ಹಾಕಿಕೊಂಡು ಬರಬಾರದು ಅಂತ ಹೇಳಿರಲಿಲ್ಲ. ಜನಿವಾರ ಕತ್ತರಿಸಿ ಕಿತ್ತಾಕಿದ ಕಾರಣ ತುಂಬಾ ನೋವು ಆಗಿದೆ. ಮತ್ತೆ ಉಪ ನಯನ ನಡೆಸಿ ಜನಿವಾರ ಹಾಕಿಕೊಳ್ಳಬೇಕು ಎಂದು ಅಳಲು ತೋಡಿಕೊಂಡಿದ್ದಾನೆ.

ಇದನ್ನೂ ಓದಿ: ಸಿಇಟಿ ಕೇಂದ್ರದಲ್ಲಿ ವಿದ್ಯಾರ್ಥಿ ಜನಿವಾರ ತೆಗೆಸಿದ ಆರೋಪ: ಕೃಪಾನಿಧಿ ಕಾಲೇಜಿನ ಮೂವರು ಸಿಬ್ಬಂದಿ ಅಮಾನತು

Follow Us