ಚಿಕ್ಕಬಳ್ಳಾಪುರ ದುರಂತ: ಮೃತರ ಕುಟುಂಬಗಳಿಗೆ ಶಾಸಕ ಪ್ರದೀಪ್ ಈಶ್ವರ್ ನೆರವಿನ ಭರವಸೆ
ಚಿಕ್ಕಬಳ್ಳಾಪುರದಲ್ಲಿ ಸಂಭವಿಸಿದ ಹೃದಯವಿದ್ರಾವಕ ಅಪಘಾತದಲ್ಲಿ ನಾಲ್ವರು ಯುವಕರು ಸಾವನ್ನಪ್ಪಿದ್ದಾರೆ. ಟಿಪ್ಪರ್ ಅತಿವೇಗವೇ ಇದಕ್ಕೆ ಕಾರಣ ಎಂದು ಶಾಸಕ ಪ್ರದೀಪ್ ಈಶ್ವರ್ ತಿಳಿಸಿದ್ದಾರೆ. ಮುಖ್ಯಮಂತ್ರಿಗಳ ವಿಶೇಷ ನಿಧಿಯಿಂದ ಪರಿಹಾರ, ಕುಟುಂಬಗಳಿಗೆ ಉದ್ಯೋಗ ಮತ್ತು ಆರ್ಥಿಕ ನೆರವು ನೀಡುವ ಭರವಸೆ ನೀಡಿದ್ದಾರೆ. ಅಲ್ಲದೆ, ಹೆಲ್ಮೆಟ್ ಕಡ್ಡಾಯದ ಮಹತ್ವವನ್ನು ಪುನರುಚ್ಚರಿಸಿದ್ದಾರೆ.
ಚಿಕ್ಕಬಳ್ಳಾಪುರ, ಡಿ.25: ಚಿಕ್ಕಬಳ್ಳಾಪುರದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಅಜ್ಜವಾರ ಗೇಟ್ ಬಳಿ ನಾಲ್ವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ರಾತ್ರಿ 9:30ರ ಸುಮಾರಿಗೆ ನರಸಿಂಹಮೂರ್ತಿ, ಅರುಣ್, ಮನೋಜ್ ಮತ್ತು ನಂದೀಶ್ ಎಂಬ ಯುವಕರು ಒಂದೇ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದಾಗ, ಅತಿವೇಗದಿಂದ ಬಂದ ಟಿಪ್ಪರ್ ಲಾರಿ ಡಿಕ್ಕಿ ಹೊಡೆದಿದೆ. ಯುವಕರು ನಿಧಾನವಾಗಿ ಬಲ ತಿರುವು ತೆಗೆದುಕೊಳ್ಳುತ್ತಿದ್ದಾಗ ಈ ದುರಂತ ಸಂಭವಿಸಿದೆ ಎಂದು ತಿಳಿದುಬಂದಿದೆ. ಈ ಘಟನೆ ಕುರಿತು ಪ್ರತಿಕ್ರಿಯಿಸಿದ ಶಾಸಕ ಪ್ರದೀಪ್ ಈಶ್ವರ್ ಅವರು, ಟಿಪ್ಪರ್ ಚಾಲಕನ ನಿರ್ಲಕ್ಷ್ಯದಿಂದ ಈ ನಡೆದಿದೆ. ವೇಗವಾಗಿ ಬಂದ ಕಾರಣ ಈ ಘಟನೆ ನಡೆದಿದೆ ಎಂದು ಹೇಳಿದರು. ಅಪಘಾತದ ಮಾಹಿತಿ ಲಭ್ಯವಾದ ಕೂಡಲೇ ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದು, ಮುಖ್ಯಮಂತ್ರಿಗಳ ವಿಶೇಷ ನಿಧಿಯಿಂದ ಮೃತರ ಕುಟುಂಬಗಳಿಗೆ ಪರಿಹಾರ ಘೋಷಿಸಲಾಗುವುದು ಎಂದು ಭರವಸೆ ನೀಡಿದ್ದಾರೆ ಎಂದು ಶಾಸಕ ಪ್ರದೀಪ್ ಈಶ್ವರ್ ಹೇಳಿದರು. ಅಲ್ಲದೆ, ಮೃತರ ಕುಟುಂಬದ ಸದಸ್ಯರಿಗೆ ಡಿಸಿ ತಾಲೂಕು ಕಚೇರಿಯಲ್ಲಿ ಉದ್ಯೋಗಾವಕಾಶ ಕಲ್ಪಿಸುವ ಪ್ರಯತ್ನ ಮಾಡುವುದಾಗಿ ತಿಳಿಸಿದ್ದಾರೆ. ಪ್ರದೀಪ್ ಈಶ್ವರ್ ಅವರು ಘಟನೆಯ ಬಗ್ಗೆ ದುಃಖ ವ್ಯಕ್ತಪಡಿಸಿದ್ದು, ಈ ಸಂದರ್ಭದಲ್ಲಿ ಹೆಲ್ಮೆಟ್ ಧರಿಸುವ ಮಹತ್ವದ ಬಗ್ಗೆಯೂ ಹೇಳಿದ್ದಾರೆ. ಅಪಘಾತದಲ್ಲಿ ಒಬ್ಬ ಯುವಕ ಮದುವೆಯಾಗಿ 8 ತಿಂಗಳಾಗಿದ್ದು, ಮತ್ತೊಬ್ಬ ಯುವಕನ ಸಹೋದರಿ ದೂರದ ಊರಿನಲ್ಲಿ ಓದುತ್ತಿರುವ ಕಾರಣ ಆಕೆಯನ್ನು ಕರೆಸುವ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ಹೇಳಿದ್ದಾರೆ.
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

