ಮದ್ವೆ ಆದ್ಮೇಲೂ ಬೇರೆ ಹುಡುಗಿಯರಿಗೆ ಮೆಸೇಜ್: ಗಂಡನ ಅಸಲಿ ಮುಖ ಬಯಲಿಗೆಳೆದ ಪತ್ನಿ

Updated By: ಗಂಗಾಧರ​ ಬ. ಸಾಬೋಜಿ

Updated on: Nov 20, 2025 | 10:13 PM

ಚಿಂತಾಮಣಿಯ ಯುವಕನೊರ್ವ ಹಲವು ಮಹಿಳೆಯರಿಗೆ ವಂಚನೆ ಮಾಡಿದ್ದಾನೆ. ವಿವಾಹಿತ ಮಹಿಳೆಯರನ್ನು ಮರು ಮದುವೆಯಾಗುವ ನೆಪದಲ್ಲಿ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ವಾಟ್ಸಾಪ್ ಮೂಲಕ ಪರಿಚಯಿಸಿಕೊಂಡು ಲಕ್ಷಾಂತರ ರೂ. ವಂಚಿಸಿರುವಂತಹ ಘಟನೆ ಬೆಳಕಿಗೆ ಬಂದಿದೆ. ಪೊಲೀಸರು ಇಂತಹ ವ್ಯಕ್ತಿಗಳ ವಿರುದ್ಧ ಕಠಿಣ ಕ್ರಮ ಕೈಗೊಂಡು ನೊಂದ ಮಹಿಳೆಯರಿಗೆ ನ್ಯಾಯ ಒದಗಿಸಬೇಕು ಎಂದು ಸಂತ್ರಸ್ತ ಮಹಿಳೆ ಹೇಳಿದ್ದಾರೆ.

ಚಿಕ್ಕಬಳ್ಳಾಪುರ, ನವೆಂಬರ್​ 20: ಯುವಕನೊರ್ವ ವಿವಾಹಿತ ಒಂಟಿ ಮಹಿಳೆಯರನ್ನು ಮರು ಮದುವೆ ಮಾಡಿಕೊಳ್ಳೊ ನೆಪದಲ್ಲಿ ನಂಬಿಸಿ ಅವರಿಂದ ಲಕ್ಷ ಲಕ್ಷ ಹಣ ಪಡೆದು ಮಹಾಮೋಸ ಮಾಡಿರುವಂತಹ ಪ್ರಕರಣವೊಂದು ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಸದ್ಯ ಸಂತ್ರಸ್ತ ಮಹಿಳೆಯರು ಪೊಲೀಸ್​ ಠಾಣೆಗೆ ದೂರು ನೀಡಿದ್ದಾರೆ. ಈ ಕುರಿತು ಸಂತ್ರಸ್ತ ಮಹಿಳೆಯೊಬ್ಬರು ಮಾತನಾಡಿದ್ದು ಹೀಗೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.