ಚಿಕ್ಕಬಳ್ಳಾಪುರ ಜೆಡಿಎಸ್ ಮುಖಂಡನ ಬರ್ಬರ ಹತ್ಯೆ, ಮಾರಕಾಸ್ತ್ರಗಳಿಂದ ಮನಬಂದಂತೆ ಹಲ್ಲೆ
ಎಸ್ಪಿ ಕುಶಾಲ್ ಚೌಕ್ಸೆ ಹೇಳುವ ಪ್ರಕಾರ ವೆಂಕಟೇಶ್ ತಮ್ಮ ಸ್ಕೂಟಿಯಲ್ಲಿ ಮನೆಗೆ ಹೋಗುತ್ತಿದ್ದಾಗ ಕೊಲೆ ನಡೆದಿದೆ. ಅವರ ಮೇಲೆ ಹರಿತವಾದ ಆಯುಧಗಳಿಂದ ಹಲ್ಲೆ ಮಾಡಲಾಗಿದ್ದು ಹಂತಕರು ಪರಾರಿಯಾಗಿದ್ದಾರೆ. ಹಂತಕರು ಯಾರು ಅವರ ಉದ್ದೇಶವೇನಾಗಿತ್ತು ಅನ್ನೋದು ಇನ್ನೂ ಗೊತ್ತಾಗಿಲ್ಲ, ತಮ್ಮ ಪೊಲೀಸರು ಆದಷ್ಟು ಬೇಗ ಹಂತಕರನ್ನು ಪತ್ತೆ ಹೆಚ್ಚಲಿದ್ದಾರೆ ಎಂದು ಪೊಲೀಸ್ ಅಧಿಕಾರಿ ಹೇಳುತ್ತಾರೆ.
ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ತಮ್ಮನಾಯಕಹಳ್ಳಿ ಗೇಟ್ ಬಳಿ ಜೆಡಿಎಸ್ ಮುಖಂಡರೊಬ್ಬರನ್ನು ಕಳೆದ ರಾತ್ರಿ ಬರ್ಬರವಾಗಿ ಹತ್ಯೆಗೈಯ್ಯಲಾಗಿದೆ. ಮೃತ ಧುರೀಣನನ್ನು ವೆಂಕಟೇಶ್ ಎಂದು ಗುರುತಿಸಲಾಗಿದ್ದು ಹಂತಕರು ನಿರ್ದಯತೆಯಿಂದ ಅವರ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ. ಕೊಲೆಗಡುಕರು ತೋರಿರುವ ಬರ್ಬರತೆಯನ್ನು ಗಮನಿಸಿದರೆ ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ಹಲ್ಲೆ ನಡೆದಿದೆ. ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಾಲ್ ಚೌಕ್ಸೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಗದಗ: ಲಾಡ್ಜ್ನಲ್ಲಿ ಇಂಜಿನಿಯರ್ ಆತ್ಮಹತ್ಯೆ, ಸಾವಿನ ಸುತ್ತ ಅನುಮಾನಗಳ ಹುತ್ತ