Pradeep Eshwar: ನನಗೆ ಸಚಿವ ಸ್ಥಾನ ಬೇಡ, ಡಾ ಎಮ್ ಸಿ ಸುಧಾಕರ್ ಗೆ ಸಿಕ್ಕರೆ ಸಾಕು ಎಂದಿದ್ದ ಪ್ರದೀಪ್ ಈಶ್ವರ್ ರಾಜಭವನದ ಬಳಿ ಹೇಳಿದ್ದೇನು?

ಅರುಣ್​ ಕುಮಾರ್​ ಬೆಳ್ಳಿ

Updated on: May 27, 2023 | 12:23 PM

ಚಿಂತಾಮಣಿ ಶಾಸಕ ಡಾ ಎಮ್ ಸಿ ಸುಧಾಕರ್ ಅವರಿಗೆ ಸಚಿವ ಸ್ಥಾನ ಸಿಕ್ಕರೆ ತನಗೆ ಬಹಳ ಖುಷಿಯಾಗುತ್ತದೆ ಅಂತ ಪ್ರದೀಪ್ ಹೇಳಿದ್ದರು.

ಬೆಂಗಳೂರು: ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ರಾಜ್ಯ ರಾಜಕೀಯ ವಲಯ ಅಗ್ರಗಣ್ಯ ನಾಯಕರಲ್ಲಿ ಒಬ್ಬರೆನಿಸಿಕೊಂಡಿದ್ದ ಡಾ ಕೆ ಸುಧಾಕರ್ (Dr K Sudhakar) ಅವರನ್ನು ಸೋಲಿಸಿ ವಿಧಾನಸಭೆಗೆ ಆಯ್ಕೆಯಾಗಿರುವ ಯುವ ಕಾಂಗ್ರೆಸ್ ನಾಯಕ ಪ್ರದೀಪ್ ಈಶ್ವರ್ (Pradeep Eshwar) ತನಗೆ ಸಚಿವನಾಗುವ ಆಸೆ ಇಲ್ಲ, ಶಾಸಕನಾಗೇ ಜನರ ಸೇವೆ ಮಾಡುವುದಾಗಿ ಹೇಳಿದ್ದರು. ತನಗಿಂತ ಹಿರಿಯರು ಸಾಕಷ್ಟು ನಾಯಕರಿದ್ದಾರೆ, ನ್ಯಾಯಯುತವಾಗಿ ಅವರಿಗೆ ಅವಕಾಶ ಸಿಗಬೇಕು ಎಂದು ಹೇಳಿದ್ದ ಪ್ರದೀಪ್, ಚಿಂತಾಮಣಿ ಶಾಸಕ ಡಾ ಎಮ್ ಸಿ ಸುಧಾಕರ್ (Dr MC Sudhakar) ಅವರಿಗೆ ಸಚಿವ ಸ್ಥಾನ ಸಿಕ್ಕರೆ ತನಗೆ ಬಹಳ ಖುಷಿಯಾಗುತ್ತದೆ ಅಂದಿದ್ದರು. ಅವರ ಆಸೆ ಈಡೇರಿದೆ ಇಂದು ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಿದ್ದ ಅವರು ಸಚಿವರಾಗಿ ಆಯ್ಕೆಯಾದವರಿಗೆ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಅಭಿನಂದನೆ ಮತ್ತು ಕೃತಜ್ಞತೆಗಳನ್ನು ಸಲ್ಲಿಸಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.