ಚಿಕ್ಕಬಳ್ಳಾಪುರ: ಬಿಜೆಪಿ ಮುಖಂಡರಿಗೆ ಹಾಕಿದ ಸೇಬಿನ ಹಾರಕ್ಕೆ ಮುಗಿಬಿದ್ದ ಜನರು-ಇಲ್ಲಿದೆ ವಿಡಿಯೋ
ಲೋಕಸಭೆ ಚುನಾವಣೆಗೆ ಇನ್ನೂ ಸೀಟು ಹಂಚಿಕೆಯಾಗಿಲ್ಲ. ಈ ಮಧ್ಯೆ ಶಾಸಕ ಎಸ್.ಆರ್ ವಿಶ್ವನಾಥ್(S. R. Vishwanath) ಚಿಕ್ಕಬಳ್ಳಾಪುರ(Chikkaballapur)ದಲ್ಲಿ ಕಾರ್ ರ್ಯಾಲಿ ಹಮ್ಮಿಕೊಂಡಿದ್ದರು. ಅದರಂತೆ ನಗರದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ವಿಶ್ವನಾಥ್ ಹಾಗೂ ಬಿಜೆಪಿ ಮುಖಂಡರಿಗೆ ಬೃಹತ್ ಸೇಬಿನ ಹಾರ ಹಾಕಿ ಸ್ವಾಗತಿಸಲಾಯಿತು.
ಚಿಕ್ಕಬಳ್ಳಾಫುರ, ಮಾ.03: ಲೋಕಸಭೆ ಚುನಾವಣೆಗೆ ಇನ್ನೂ ಸೀಟು ಹಂಚಿಕೆಯಾಗಿಲ್ಲ. ಈ ಮಧ್ಯೆ ಶಾಸಕ ಎಸ್.ಆರ್ ವಿಶ್ವನಾಥ್(S. R. Vishwanath) ಚಿಕ್ಕಬಳ್ಳಾಪುರ(Chikkaballapur)ದಲ್ಲಿ ಕಾರ್ ರ್ಯಾಲಿ ಹಮ್ಮಿಕೊಂಡಿದ್ದರು. ಅದರಂತೆ ನಗರದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ವಿಶ್ವನಾಥ್ ಹಾಗೂ ಬಿಜೆಪಿ ಮುಖಂಡರಿಗೆ ಬೃಹತ್ ಸೇಬಿನ ಹಾರ ಹಾಕಿ ಸ್ವಾಗತಿಸಲಾಯಿತು. ಇದಾದ ಬಳಿಕ ಬಿಜೆಪಿ ಮುಖಂಡರಿಗೆ ಹಾಕಿದ ಸೇಬಿನ ಹಾರಕ್ಕೆ ಮುಗಿಬಿದ್ದ ಜನರು, ಕ್ಷಣಾರ್ಧದಲ್ಲಿ ಸೇಬುಗಳನ್ನು ಕಿತ್ತುಕೊಂಡಿದ್ದಾರೆ. ಎರಡು ಬೃಹತ್ ಸೇಬಿನ ಹಾರದಲ್ಲಿದ್ದ ಹಣ್ಣುಗಳನ್ನು ಕಿತ್ತುಕೊಳ್ಳಲು ಜನರು ಹರಸಾಹಸಪಟ್ಟಿದ್ದಾರೆ. ಇದಷ್ಟೇ ಅಲ್ಲ, ಬಿಜೆಪಿ ಕಾರ್ಯಕರ್ತರಿಗೆ ಭರ್ಜರಿ ಬಾಡೂಟ ಕೂಡ ವ್ಯವಸ್ಥೆ ಮಾಡಲಾಗಿತ್ತು.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ
Latest Videos