ಚಿಕ್ಕಬಳ್ಳಾಪುರ: ಶಿಡ್ಲಘಟ್ಟದಲ್ಲಿ ಸಿಎಂ ಸಿದ್ದರಾಮಯ್ಯ ಕಾರ್ಯಕ್ರಮಕ್ಕೆ ಬರುವವರಿಗೆ ಉಚಿತ ಪೆಟ್ರೋಲ್, ಮುಗಿಬಿದ್ದ ಜನ
ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆಯಲ್ಲಿ ಭಾಗವಹಿಸುತ್ತಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್ ಸಹ ಭಾಗವಹಿಸುತ್ತಿದ್ದಾರೆ. ಕಾರ್ಯಕ್ರಮಕ್ಕೆ ಬೈಕ್‌ನಲ್ಲಿ ಬರುವವರಿಗೆ ಕಾಂಗ್ರೆಸ್ ಮುಖಂಡರು ಉಚಿತ ಪೆಟ್ರೋಲ್ ನೀಡುತ್ತಿದ್ದು, ಉಚಿತ ಪೆಟ್ರೋಲ್ಗಾಗಿ ಜನ ಮುಗಿಬಿದ್ದಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
ಚಿಕ್ಕಬಳ್ಳಾಪುರ, ನವೆಂಬರ್ 24: ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟದಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಜಂಟಿಯಾಗಿ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದಾರೆ. ಮುಖ್ಯಮಂತ್ರಿಗಳ ಕಾರ್ಯಕ್ರಮಕ್ಕೆ ಬೈಕ್‌ನಲ್ಲಿ ಆಗಮಿಸುವವರಿಗೆ ಕಾಂಗ್ರೆಸ್ ಮುಖಂಡರು ಪ್ರತಿ ಬೈಕ್‌ಗೆ 2 ಲೀಟರ್ ಪೆಟ್ರೋಲ್ ಉಚಿತವಾಗಿ ಹಂಚುತ್ತಿದ್ದಾರೆ. ಇದರಿಂದಾಗಿ ಉಚಿತ ಪೆಟ್ರೋಲ್ ಪಡೆಯಲು ಕಾಂಗ್ರೆಸ್ ಕಾರ್ಯಕರ್ತರು ದೊಡ್ಡ ಸಂಖ್ಯೆಯಲ್ಲಿ ಮುಗಿಬಿದ್ದಿದ್ದಾರೆ. 11.30ಕ್ಕೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಶಿಡ್ಲಘಟ್ಟ ತಾಲೂಕಿನ ಹನುಮಂತಪುರಕ್ಕೆ ಆಗಮಿಸುತ್ತಿದ್ದು, ಇಬ್ಬರು ನಾಯಕರು ಹಲವು ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಸರ್ಕಾರಿ ಹೈಟೆಕ್ ರೇಷ್ಮೆ ಗೂಡಿನ ಮಾರುಕಟ್ಟೆಗೆ ಶಂಕುಸ್ಥಾಪನೆ, ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಕ್ಯಾಂಪಸ್ ಕಟ್ಟಡ ಉದ್ಘಾಟನೆ, ಒಟ್ಟು 2000 ಕೋಟಿ ರೂ. ಮೌಲ್ಯದ, 28 ಇಲಾಖೆಗಳ, 947 ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ದೊರೆಯಲಿದೆ.

