ಚಿಕ್ಕಮಗಳೂರಿನಲ್ಲಿ ಅಭಿವೃದ್ಧಿ ಕೆಲಸಗಳು ವಿಳಂಬಗೊಳ್ಳುತ್ತಿರುವುದಕ್ಕೆ ಅಧಿಕಾರಿಗಳ ವಿರುದ್ಧ ಉಸ್ತುವಾರಿ ಸಚಿವ ಭೈರತಿ ಬಸವರಾಜ ಕಿಡಿ ಕಾರಿದರು

| Updated By: ಅರುಣ್​ ಕುಮಾರ್​ ಬೆಳ್ಳಿ

Updated on: Aug 08, 2022 | 5:10 PM

ಅಮೃತ್ ಯೋಜನೆ ಮತ್ತು ಒಳಚರಂಡಿ ಕಾಮಗಾರಿ ವಿಳಂಬಗೊಳ್ಳುತ್ತಿರುವುದಕ್ಕೆ ಸಚಿವರು ಅಧಿಕಾರಿಗಳ ಮೇಲೆ ಕೆಂಡ ಕಾರಿದರು.

ಚಿಕ್ಕಮಗಳೂರು: ಜಿಲ್ಲೆಯ ಉಸ್ತುವಾರಿ ಸಚಿವ ಭೈರತಿ ಬಸವರಾಜ (Byrathi Basavaraj) ಅವರು ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ (DC Office) ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಕರ್ತವ್ಯದ ಬಗ್ಗೆ ನಿರ್ಲಕ್ಷ್ಯ ಧೋರಣೆ ತಳೆದಿರುವ ಕೆಲ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಅಮೃತ್ ಯೋಜನೆ (Amrit Project) ಮತ್ತು ಒಳಚರಂಡಿ ಕಾಮಗಾರಿ ವಿಳಂಬಗೊಳ್ಳುತ್ತಿರುವುದಕ್ಕೆ ಸಚಿವರು ಅಧಿಕಾರಿಗಳ ಮೇಲೆ ಕೆಂಡ ಕಾರಿದರು.