ಬೆಂಗಳೂರಲ್ಲಿ ಪ್ರಧಾನಿ ಮೋದಿಯವರನ್ನು ಮುತ್ತಿಗೆ ಹಾಕಬೇಕೆಂದಿದ್ದ ಚಿಕ್ಕಮಗಳೂರು ಕಾಂಗ್ರೆಸ್ ಕಾರ್ಯಕರ್ತರು ಪೊಲೀಸರ ವಶಕ್ಕೆ
ಪೊಲೀಸರು ಸೋಮವಾರ ಬೆಳಗ್ಗೆ ಚಿಕ್ಕಮಗಳೂರಿನ ನಿರೀಕ್ಷಣಾ ಬಂಗ್ಲೆಯಲ್ಲಿದ್ದ ಕಾಂಗ್ರೆಸ್ ಕಾರ್ಯಕರ್ತರನ್ನು ವಶಕ್ಕೆ ಪಡೆದರು. ಬಂಧನಕ್ಕೊಳಗಾಗುವ ಮೊದಲು ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.
Chikkamagalur: ಕೇಂದ್ರ ಸರ್ಕಾರ ಈಡಿಯನ್ನು (ED) ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಅರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು (Congress Workers) ದೇಶದೆಲ್ಲೆಡೆ ನಡೆಯುತ್ತಿರುವ ಪ್ರತಿಭಟನೆಗಳು ಇನ್ನೂ ಮುಂದುವರಿಯುವೆ. ಚಿಕ್ಕಮಗಳೂರಿನ (Chikkamagalur) ಸುಮಾರು 40 ಕಾರ್ಯಕರ್ತರು ಸೋಮವಾರದಂದು ಬೆಂಗಳೂರಿಗೆ ತೆರಳಿ ಕರ್ನಾಟಕಕ್ಕೆ ಆಗಮಿಸಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ (PM Narendra Modi) ಅವರನ್ನು ಮುತ್ತಿಗೆ ಹಾಕಬೇಕೆಂದುಕೊಂಡಿದ್ದ ಯೋಜನೆಯನ್ನು ಚಿಕ್ಕಮಗಳೂರಿನ ಪೊಲೀಸರು ವಿಫಲಗೊಳಿಸಿದ್ದಾರೆ. ಪೊಲೀಸರು ಸೋಮವಾರ ಬೆಳಗ್ಗೆ ಚಿಕ್ಕಮಗಳೂರಿನ ನಿರೀಕ್ಷಣಾ ಬಂಗ್ಲೆಯಲ್ಲಿದ್ದ ಕಾಂಗ್ರೆಸ್ ಕಾರ್ಯಕರ್ತರನ್ನು ವಶಕ್ಕೆ ಪಡೆದರು. ಬಂಧನಕ್ಕೊಳಗಾಗುವ ಮೊದಲು ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.
ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Latest Videos