ಚಿಕ್ಕಮಗಳೂರಿನಲ್ಲಿ ಗುಡುಗು ಸಹಿತ ಧಾರಾಕಾರ ಮಳೆ; ಪ್ರವಾಸಿಗರು ಕಂಗಾಲು

| Updated By: ಕಿರಣ್ ಹನುಮಂತ್​ ಮಾದಾರ್

Updated on: May 14, 2024 | 4:52 PM

ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಳೆದೊಂದು ವಾರದಿಂದ ಧಾರಾಕಾರ ಮಳೆಯಾಗುತ್ತಿದ್ರೆ. ಇತ್ತ ಬಯಲು ಸೀಮೆ ಭಾಗದಲ್ಲಿ ಹನಿ ಹನಿ ನೀರಿಗೂ ಆಹಾಕಾರ ಪಡುತ್ತಿದ್ದಾರೆ. ಈ ಮಧ್ಯೆ ಇಂದು(ಮೇ.14) ಜಿಲ್ಲೆಯ ಶೃಂಗೇರಿ ತಾಲೂಕಿನಲ್ಲಿ ಕಳೆದ ಅರ್ಧ ಗಂಟೆಯಿಂದ ಗುಡುಗು-ಸಿಡಿಲು ಸಹಿತ ಧಾರಾಕಾರ ಮಳೆಯಾಗುತ್ತಿದೆ.

ಚಿಕ್ಕಮಗಳೂರು, ಮೇ.14: ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ(Sringeri) ತಾಲೂಕಿನಲ್ಲಿ ಕಳೆದ ಅರ್ಧ ಗಂಟೆಯಿಂದ ಗುಡುಗು-ಸಿಡಿಲು ಸಹಿತ ಧಾರಾಕಾರ ಮಳೆ(Rain)ಯಾಗುತ್ತಿದೆ. ಇದರಿಂದ ಅಡಿಕೆ-ಕಾಫಿ ಬೆಳೆಗಾರರ ಮೊಗದಲ್ಲಿ ಮಂದಹಾಸ ಮೂಡಿದರೆ, ಇತ್ತ ಭಾರಿ ಮಳೆಯಿಂದ ಪ್ರವಾಸಿಗರು, ಜನಸಾಮಾನ್ಯರು ಕಂಗಾಲಾಗಿದ್ದಾರೆ. ಘಟ್ಟ ಪ್ರದೇಶದಲ್ಲಿ ಭಾರೀ ಮಳೆ ಹಿನ್ನೆಲೆ ತುಂಗಾ ನದಿ ಹರಿವಿನಲ್ಲಿ ಕೊಂಚ ಏರಿಕೆಯಾಗಿದೆ.

ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಳೆದೊಂದು ವಾರದಿಂದ ಧಾರಾಕಾರವಾಗಿ ಮಳೆಯಾಗುತ್ತಿದ್ದು,  ತಾಲೂಕಿನ ಶಿರವಾಸೆ, ಮೂಡಿಗೆರೆ, ಕಳಸ, NR ಪುರ ಹಾಗೂ ಬಯಲು ಸೀಮೆಯ ಕಡೂರು ತಾಲೂಕಿನ ಹಲವೆಡೆ ಉತ್ತಮ ಮಳೆಯಾಗಿದೆ. ಮಳೆಗಾಗಿ‌ ಆಗಸದತ್ತ ನೋಡ್ತಿದ್ದ ಜಿಲ್ಲೆಯ ರೈತರು ಮಳೆ ಕಂಡು ಸಂತಸಗೊಂಡಿದ್ದಾರೆ. ಕಳೆದ ವರ್ಷ ವಾಡಿಕೆ ಪ್ರಮಾಣದಲ್ಲಿ ಮಳೆಯಾಗದೆ ಮಲೆನಾಡು ಸೇರಿದಂತೆ ಜಿಲ್ಲೆಯಾದ್ಯಂತ ಬರ ಆವರಿಸಿತ್ತು. ಆದ್ರೆ, ಕಳೆದ ಕೆಲ ದಿನದಿಂದ ಮಲೆನಾಡು ಭಾಗದಲ್ಲಿ ಉತ್ತಮ ಮಳೆಯಾಗುತ್ತಿದೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:52 pm, Tue, 14 May 24

Follow us on