AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವಿರಮ್ಮ ದರ್ಶನಕ್ಕೆ ಭಕ್ತಸಾಗರ! ಬೆಟ್ಟದ ತುದಿಯಲ್ಲಿ ಕಂಬಿ ಮುರಿದು ದುರಂತ; 20ಕ್ಕೂ ಹೆಚ್ಚು ಮಂದಿಗೆ ಗಾಯ

ದೇವಿರಮ್ಮ ದರ್ಶನಕ್ಕೆ ಭಕ್ತಸಾಗರ! ಬೆಟ್ಟದ ತುದಿಯಲ್ಲಿ ಕಂಬಿ ಮುರಿದು ದುರಂತ; 20ಕ್ಕೂ ಹೆಚ್ಚು ಮಂದಿಗೆ ಗಾಯ

ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: |

Updated on: Nov 08, 2026 | 3:37 PM

Share

ಮುಖ್ಯಾಂಶಗಳು

  • ದೇವಿರಮ್ಮ ದರ್ಶನಕ್ಕೆ ನಿರೀಕ್ಷೆ ಮೀರಿ ಹರಿದು ಬಂದ ಭಕ್ತಸಾಗರ
  • ಕಂಬಿ ಮುರಿದ ಪರಿಣಾಮ ಒಬ್ಬರ ಮೇಲೆ ಮತ್ತೊಬ್ಬರು ಬಿದ್ದು ಗಾಯ
  • ಓರ್ವ ಬಾಲಕ‌ ಸೇರಿದಂತೆ 20ಕ್ಕೂ ಹೆಚ್ಚು ಜನರಿಗೆ‌ ಗಂಭೀರ ಗಾಯ

ಚಿಕ್ಕಮಗಳೂರು ಜಿಲ್ಲೆಯ ಬಿಂಡಿಗ ದೇವಿರಮ್ಮ ಬೆಟ್ಟದಲ್ಲಿ ಭಕ್ತರ ನೂಕುನುಗ್ಗಲಿನಿಂದ ದುರ್ಘಟನೆ ಸಂಭವಿಸಿದೆ. ಬೆಟ್ಟದ ತುದಿಯಲ್ಲಿ ಅಳವಡಿಸಿದ್ದ ಕಬ್ಬಿಣದ ಕಂಬಿ ಮುರಿದು ಬಿದ್ದ ಪರಿಣಾಮ 20ಕ್ಕೂ ಹೆಚ್ಚು ಭಕ್ತರು ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ ಒಬ್ಬ ಬಾಲಕನೂ ಸೇರಿದ್ದು, ಎಲ್ಲರನ್ನೂ ಮಲ್ಲೇಗೌಡ ಆಸ್ಪತ್ರೆಗೆ ದಾಖಲಿಸಲಾಗಿದೆ. ದೇವಿರಮ್ಮ ದರ್ಶನಕ್ಕೆ ನಿರೀಕ್ಷೆಗೂ ಮೀರಿ ಭಕ್ತರು ಆಗಮಿಸಿದ್ದರು.

ಚಿಕ್ಕಮಗಳೂರು, ನವೆಂಬರ್​​ 08: ಚಿಕ್ಕಮಗಳೂರು ತಾಲೂಕಿನ ಚಂದ್ರದ್ರೋಣ ಪರ್ವತದ ಸಾಲಿನಲ್ಲಿರುವ ಬಿಂಡಿಗ ದೇವಿರಮ್ಮ ದರ್ಶನಕ್ಕೆ ನಿರೀಕ್ಷೆಗೂ ಮೀರಿ ಭಕ್ತಸಾಗರ ಹರಿದು ಬರುತ್ತಿದೆ. ಶನಿವಾರ ಬೆಟ್ಟದಿಂದ ಜಾರಿಬಿದ್ದು ಯುವಕನೋರ್ವ ಗಾಯಗೊಂಡಿದ್ದ. ಭಾನುವಾರ ಬೆಟ್ಟ ಏರುವಾಗ ಹೃದಯಾಘಾತದಿಂದ ಓರ್ವ ಸಾವನ್ನಪ್ಪಿದ್ದಾರೆ. ಇದೆಲ್ಲದರ ಮಧ್ಯೆ ಇದೀಗ ಮತ್ತೊಂದು ಅವಘಡ ಸಂಭವಿಸಿದೆ. ಬೆಟ್ಟದ ಮೇಲೆ ಹಾಕಿದ್ದ ಕಬ್ಬಿಣದ ಕಂಬಿ ಮುರಿದ ಪರಿಣಾಮ ಒಬ್ಬರ ಮೇಲೆ ಮತ್ತೊಬ್ಬರು ಬಿದ್ದು, ಓರ್ವ ಬಾಲಕ‌ ಸೇರಿದಂತೆ 20ಕ್ಕೂ ಹೆಚ್ಚು ಜನರು ಗಂಭೀರ ಗಾಯಗೊಂಡಿದ್ದಾರೆ. ಗಾಯಗೊಂಡ ಭಕ್ತರನ್ನು ಚಿಕ್ಕಮಗಳೂರು ಮಲ್ಲೇಗೌಡ ಆಸ್ಪತ್ರೆಗೆ ರವಾನಿಸಲಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು

ಕಾಫಿನಾಡು ಚಿಕ್ಕಮಗಳೂರಿನ ಮಲೆನಾಡಿನ ಮಾವಿನಗುಣಿ ಗ್ರಾಮದಿಂದ ಬೆಂಗಳೂರಿಗೆ ಬಂದು ಪತ್ರಿಕೋದ್ಯಮ ವೃತ್ತಿ ಆರಂಭಿಸಿ, ಹಾಯ್ ಬೆಂಗಳೂರು, ಜನಶ್ರೀ, ಕಸ್ತೂರಿ, ಟೈಮ್ಸ್ ನೌ ನಲ್ಲಿ ಕೆಲಸ ಮಾಡಿದ್ದು. ಸದ್ಯ ಟಿವಿ9 ಕನ್ನಡದಲ್ಲಿ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದು. 8 ವರ್ಷಗಳ ಕಾಲ ರಾಜಕೀಯ, ಕ್ರೈಮ್ ಸೇರಿದಂತೆ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದು. ಉತ್ತಮ ಸಮಾಜಕ್ಕಾಗಿ ಟಿವಿ9 ಜೊತೆ ವೃತ್ತಿ ಜೀವನ ಸಾಗಿದೆ.

Read More