AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರವಾಸಿಗರ ಗಮನಕ್ಕೆ: ಚಂದ್ರದ್ರೋಣ ಪರ್ವತ ಸಾಲಿನ ಪ್ರವಾಸಿ ತಾಣಗಳಿಗೆ ನಿರ್ಬಂಧ

ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತದಲ್ಲಿರುವ ಶ್ರೀ ಗುರುದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾದಲ್ಲಿ ಮಾರ್ಚ್ 15 ರಿಂದ 17 ರವರೆಗೆ ಮೂರು ದಿನಗಳ ಉರುಸ್ ನಡೆಯಲಿದೆ. ಜಿಲ್ಲಾಡಳಿತದ ನೇತೃತ್ವದಲ್ಲಿ ನಡೆಯುವ ಈ ಉರುಸ್‌ಗೆ ಸಾವಿರಾರು ಭಕ್ತರು ಆಗಮಿಸುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ ವಾರಾಂತ್ಯದಲ್ಲಿ ಚಿಕ್ಕಮಗಳೂರು ಜಿಲ್ಲೆಯ ಚಂದ್ರದ್ರೋಣ ಪ್ರರ್ವತ ಸಾಲಿನ ಪ್ರವಾಸಿ ಸ್ಥಳಕ್ಕೆ ಭೇಟಿ ನೀಡಬೇಕೆಂದು ಯೋಚಿಸಿದ್ದರೇ, ಈ ಸುದ್ದಿ ಒಮ್ಮೆ ಓದಿ.

ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Updated By: ವಿವೇಕ ಬಿರಾದಾರ|

Updated on: Mar 15, 2025 | 8:58 AM

Share

ಚಿಕ್ಕಮಗಳೂರು, ಮಾರ್ಚ್​ 15: ಚಿಕ್ಕಮಗಳೂರು (Chikkamagaluru) ತಾಲೂಕಿನ ಚಂದ್ರದ್ರೋಣ ಪವರ್ತದಲ್ಲಿರುವ ಶ್ರೀ ಗುರುದತ್ತಾತ್ರೇಯ ಬಾಬಾಬುಡನ್​ಸ್ವಾಮಿ ದರ್ಗಾ (ದತ್ತಪೀಠ)ದಲ್ಲಿ ಇಂದಿನಿಂದ (ಮಾರ್ಚ್​. 15) ರಿಂದ ಮೂರು ದಿನಗಳ ಕಾಲ ಚಿಕ್ಕಮಗಳೂರು ಜಿಲ್ಲಾಡಳಿತದ ನೇತೃತ್ವದಲ್ಲಿ ಉರುಸ್ ಆಚರಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ಮಾರ್ಚ್​ 15 ರಿಂದ 17 ರ ವರೆಗೂ ಚಂದ್ರದ್ರೋಣ ಪರ್ವತ (Chandradrona Hills) ಸಾಲಿನ ಪ್ರವಾಸಿ ತಾಣಗಳಿಗೆ ಪ್ರವಾಸಿಗರಿಗೆ ನಿರ್ಬಂಧಿಸಲಾಗಿದೆ.

ಚಿಕ್ಕಮಗಳೂರು ಜಿಲ್ಲಾಡಳಿತ ನೇತೃತ್ವದಲ್ಲಿ ನಡೆಯುವ ಉರುಸ್​ ಆಚರಣೆಗೆ ರಾಜ್ಯ ಸೇರಿದಂತೆ ಹೊರ ರಾಜ್ಯದಿಂದ ಸಾವಿರಾರು ಜನರು ಆಗಮಿಸುತ್ತಾರೆ. ಉರುಸ್​ ಆಚರಣೆಯಲ್ಲಿ ಸೂಫಿ ಸಂತರು ಭಾಗಿಯಾಗಲಿದ್ದಾರೆ. ಉರುಸ್​ ಆಚರಣೆ ಹಿನ್ನೆಲೆಯಲ್ಲಿ ಶ್ರೀ ಗುರುದತ್ತಾತ್ರೇಯ ಬಾಬಾಬುಡನ್​ಸ್ವಾಮಿ ದರ್ಗಾ (ದತ್ತಪೀಠ) ಸೇರಿದಂತೆ ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಪೊಲೀಸ್ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಭದ್ರತೆಗಾಗಿ ಒಂದು ಸಾವಿರ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.

ಇದನ್ನೂ ಓದಿ: ಚಿಕ್ಕಮಗಳೂರಿನಲ್ಲಿ ಮತ್ತೆ ಮುನ್ನಲೆಗೆ ಬಂದ ಜಾಮಿಯಾ ಮಸೀದಿ-ನೆಲ್ಲೂರು ಮಠ ನಡುವಿನ ಜಾಗ ವಿವಾದ

ಶಾಖಾದ್ರಿ ಕುಟುಂಬದಿಂದ ಉರುಸ್ ಆಚರಣೆಗೆ ಪಟ್ಟು

ನಮ್ಮ ನೇತೃತ್ವದಲ್ಲಿ ಉರುಸ್ ಆಚರಣೆ ನಡೆಯಬೇಕೆಂದು ಶಾಖಾದ್ರಿ ಕುಟುಂಬ ಪಟ್ಟು ಹಿಡಿದಿದೆ. ವಿವಾದಿತ ಗುಹೆಯೊಳಗಿನ ಗೋರಿಗಳಿಗೆ ಗಂಧ ಲೇಪನಕ್ಕೆ ಶಾಖಾದ್ರಿ ಕುಟುಂಬ ಅವಕಾಶ ಕೇಳಿದೆ. ಆದರೆ, ಶಾಖಾದ್ರಿ ಕುಟುಂಬದ ನೇತೃತ್ವದ ಉರುಸ್ ಆಚರಣೆಗೆ ಜಿಲ್ಲಾಡಳಿತ ಅನುಮತಿ ನೀಡಿಲ್ಲ. ಉರುಸ್, ಗಂಧ ಲೇಪನಕ್ಕೆ ಅವಕಾಶ ಕೇಳಿ ಶಾಖಾದ್ರಿ ಕುಟುಂಬ ಸುಪ್ರೀಂ ಕೋರ್ಟ್ ಮೊರೆ ಹೋಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ