Video: ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ: ಚಾಕುವಿನಿಂದ ಇರಿದು ಯುವಕನಿಗೆ ಹಲ್ಲೆ

Edited By:

Updated on: Dec 29, 2025 | 11:54 AM

ಚಿಕ್ಕಮಗಳೂರು ಹೊರವಲಯದ ಅಕ್ಷಯ್ ಬಾರ್‌ನಲ್ಲಿ ಸಿಗರೇಟ್ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಜಗಳ ನಡೆದು, ಅನಿಲ್ ಕುಮಾರ್ ಅವರಿಗೆ ಚಾಕುವಿನಿಂದ ಇರಿಯಲಾಗಿದೆ. ಈ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಪೊಲೀಸರು ಆರೋಪಿ ಲಿಖಿತ್‌ನನ್ನು ಬಂಧಿಸಿದ್ದು, ಗಾಯಗೊಂಡ ಅನಿಲ್ ಕುಮಾರ್ ಹಾಸನದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಚಿಕ್ಕಮಗಳೂರು, ಡಿ.29: ಚಿಕ್ಕಮಗಳೂರು ಹೊರವಲಯದ ಅಕ್ಷಯ್ ಬಾರ್​ನಲ್ಲಿ ಸಿಗರೇಟ್ ವಿಚಾರವಾಗಿ ವ್ಯಕ್ತಿಗೆ ಚಾಕುವಿನಿಂದ ಇರಿದು ಹಲ್ಲೆ ಮಾಡಲಾಗಿದೆ. ಸಿಗರೇಟ್ ವಿಚಾರವಾಗಿ 2 ಗುಂಪುಗಳ ನಡುವೆ ಗಲಾಟೆ ಶುರುವಾಗಿದೆ. ಮುಗ್ತಿಹಳ್ಳಿಯ ಅನಿಲ್ ಕುಮಾರ್​ಗೆ ಎಂಬುವವರಿಗೆ ಚಾಕುವಿನಿಂದ ಇರಿದು ಹಲ್ಲೆ ಮಾಡಲಾಗಿದೆ. ಇದೀಗ ಆರೋಪಿ ಯುವಕ ಲಿಖಿತ್​​ನ್ನು ಪೊಲೀಸರು ವಶ ಪಡೆದಿದ್ದಾರೆ. ಬಾರ್​​ನಲ್ಲಿ 2 ಗುಂಪುಗಳ ಗಲಾಟೆ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಇದೀಗ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಗಂಭೀರವಾಗಿ ಗಾಯಗೊಂಡ ಅನಿಲ್ ಕುಮಾರ್ ಹಾಸನದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Dec 29, 2025 11:50 AM