ಚಿಕ್ಕಮಗಳೂರು: ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ! ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ
ಜಿಲ್ಲೆಯ ಕಡೂರು ತಾಲೂಕಿನ ಬೀರೂರು ಪಟ್ಟಣದಲ್ಲಿ ಚಿರತೆ ಸಂಚಾರ ಹೆಚ್ಚಿರುವುದು ಜನರಲ್ಲಿ ಭಾರೀ ಆತಂಕ ಮೂಡಿಸಿದೆ. ರಾತ್ರಿ ಸಮಯದಲ್ಲಿ ಪಟ್ಟಣದ ಇಂಡಸ್ಟ್ರಿಯಲ್ ಏರಿಯಾ, ಅಮೃತ್ ಮಹಲ್ ಕಾವಲು ಸುತ್ತಮುತ್ತ ಹಾಗೂ ಮನೆಗಳ ಬಳಿ ಚಿರತೆ ಓಡಾಡುತ್ತಿರುವ ದೃಶ್ಯಗಳು ಕಂಡುಬಂದಿವೆ. ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಚಿರತೆ ಹೊಂಚು ಹಾಕಿ ಕುಳಿತಿರುವುದು ಸಿಸಿ ಕ್ಯಾಮರಾದಲ್ಲಿ ಸ್ಪಷ್ಟವಾಗಿ ಸೆರೆಯಾಗಿದೆ. ಜನವಸತಿ ಪ್ರದೇಶದಲ್ಲೇ ಚಿರತೆ ಸಂಚಾರ ಹೆಚ್ಚಿರುವುದರಿಂದ ನಿವಾಸಿಗಳು ಭಯಭೀತರಾಗಿದ್ದಾರೆ. ಈ ಘಟನೆ ಬೀರೂರು ಅರಣ್ಯ ಇಲಾಖೆಯ ವ್ಯಾಪ್ತಿಯಲ್ಲಿ ನಡೆದಿದ್ದು, ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಿರತೆಯನ್ನು ಹಿಡಿಯಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.
ಚಿಕ್ಕಮಗಳೂರು, ಜನವರಿ 10: ಜಿಲ್ಲೆಯ ಕಡೂರು ತಾಲೂಕಿನ ಬೀರೂರು ಪಟ್ಟಣದಲ್ಲಿ ಚಿರತೆ ಸಂಚಾರ ಹೆಚ್ಚಿರುವುದು ಜನರಲ್ಲಿ ಭಾರೀ ಆತಂಕ ಮೂಡಿಸಿದೆ. ರಾತ್ರಿ ಸಮಯದಲ್ಲಿ ಪಟ್ಟಣದ ಇಂಡಸ್ಟ್ರಿಯಲ್ ಏರಿಯಾ, ಅಮೃತ್ ಮಹಲ್ ಕಾವಲು ಸುತ್ತಮುತ್ತ ಹಾಗೂ ಮನೆಗಳ ಬಳಿ ಚಿರತೆ ಓಡಾಡುತ್ತಿರುವ ದೃಶ್ಯಗಳು ಕಂಡುಬಂದಿವೆ. ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಚಿರತೆ ಹೊಂಚು ಹಾಕಿ ಕುಳಿತಿರುವುದು ಸಿಸಿ ಕ್ಯಾಮರಾದಲ್ಲಿ ಸ್ಪಷ್ಟವಾಗಿ ಸೆರೆಯಾಗಿದೆ. ಜನವಸತಿ ಪ್ರದೇಶದಲ್ಲೇ ಚಿರತೆ ಸಂಚಾರ ಹೆಚ್ಚಿರುವುದರಿಂದ ನಿವಾಸಿಗಳು ಭಯಭೀತರಾಗಿದ್ದಾರೆ. ಈ ಘಟನೆ ಬೀರೂರು ಅರಣ್ಯ ಇಲಾಖೆಯ ವ್ಯಾಪ್ತಿಯಲ್ಲಿ ನಡೆದಿದ್ದು, ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಿರತೆಯನ್ನು ಹಿಡಿಯಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

