AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಮಗಳೂರಿನಲ್ಲಿ ಗಾಳಿಯಲ್ಲಿ 5 ಬಾರಿ ಗುಂಡು ಹಾರಿಸಿದ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಜೀವನ್!

ಚಿಕ್ಕಮಗಳೂರಿನಲ್ಲಿ ಗಾಳಿಯಲ್ಲಿ 5 ಬಾರಿ ಗುಂಡು ಹಾರಿಸಿದ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಜೀವನ್!

ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: |

Updated on: Oct 23, 2026 | 10:21 AM

Share

ಚಿಕ್ಕಮಗಳೂರಿನ ಕೋಟೆ ಬಡಾವಣೆಯ ಜನವಸತಿ ಪ್ರದೇಶದಲ್ಲಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಜೀವನ್ ಗಾಳಿಯಲ್ಲಿ ಐದು ಸುತ್ತು ಗುಂಡು ಹಾರಿಸಿದ ಘಟನೆ ವರದಿಯಾಗಿದೆ. ಆಯುಧ ಪೂಜೆ ಸಂದರ್ಭದಲ್ಲಿ ನಡೆದ ಈ ಹುಚ್ಚಾಟದ ವಿಡಿಯೋ ವೈರಲ್ ಆಗಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಜೀವನ್ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿದೆ.

ಚಿಕ್ಕಮಗಳೂರು, ಅಕ್ಟೋಬರ್ 23: ನಗರದ ಕೋಟೆ ಬಡಾವಣೆಯ ಜನವಸತಿ ಪ್ರದೇಶದಲ್ಲಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಜೀವನ್ ಗಾಳಿಯಲ್ಲಿ ಗುಂಡು ಹಾರಿಸಿ ಹುಚ್ಚಾಟ ಮೆರೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಆಯುಧ ಪೂಜೆಯ ಸಂದರ್ಭದಲ್ಲಿ ಈ ಘಟನೆ ನಡೆದಿದ್ದು, ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ.

ಜೀವನ್ ಗಾಳಿಯಲ್ಲಿ ಐದು ಸುತ್ತು ಗುಂಡು ಹಾರಿಸಲು ಅವರು ಡಬಲ್ ಬ್ಯಾರೆಲ್ ಗನ್ ಮತ್ತು ರಿವಾಲ್ವರ್ ಅನ್ನು ಬಳಸಿದ್ದಾರೆ. ಈ ಸಂಪೂರ್ಣ ಘಟನೆಯ ವಿಡಿಯೋವನ್ನು ಚಿತ್ರೀಕರಿಸಲಾಗಿದ್ದು, ಅದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡಿದೆ. ವಿಡಿಯೋ ವೈರಲ್ ಆದ ನಂತರ, ಘಟನೆಯ ಗಂಭೀರತೆಯನ್ನು ಮನಗಂಡ ಪೊಲೀಸರು, ಚಿಕ್ಕಮಗಳೂರು ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಜೀವನ್ ವಿರುದ್ಧ ಸ್ವಯಂಪ್ರೇರಿತ ಕೇಸ್ ದಾಖಲಿಸಿದ್ದಾರೆ. ಜನವಸತಿ ಪ್ರದೇಶದಲ್ಲಿ ಶಸ್ತ್ರಾಸ್ತ್ರಗಳನ್ನು ಬಳಸಿ ಗಾಳಿಯಲ್ಲಿ ಗುಂಡು ಹಾರಿಸುವುದು ಕಾನೂನುಬಾಹಿರ ಕೃತ್ಯವಾಗಿದ್ದು, ಇದು ಸಾರ್ವಜನಿಕರ ಸುರಕ್ಷತೆಗೆ ಧಕ್ಕೆ ತರುತ್ತದೆ. ಪೊಲೀಸರು ಈ ಪ್ರಕರಣದ ಬಗ್ಗೆ ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು

ಕಾಫಿನಾಡು ಚಿಕ್ಕಮಗಳೂರಿನ ಮಲೆನಾಡಿನ ಮಾವಿನಗುಣಿ ಗ್ರಾಮದಿಂದ ಬೆಂಗಳೂರಿಗೆ ಬಂದು ಪತ್ರಿಕೋದ್ಯಮ ವೃತ್ತಿ ಆರಂಭಿಸಿ, ಹಾಯ್ ಬೆಂಗಳೂರು, ಜನಶ್ರೀ, ಕಸ್ತೂರಿ, ಟೈಮ್ಸ್ ನೌ ನಲ್ಲಿ ಕೆಲಸ ಮಾಡಿದ್ದು. ಸದ್ಯ ಟಿವಿ9 ಕನ್ನಡದಲ್ಲಿ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದು. 8 ವರ್ಷಗಳ ಕಾಲ ರಾಜಕೀಯ, ಕ್ರೈಮ್ ಸೇರಿದಂತೆ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದು. ಉತ್ತಮ ಸಮಾಜಕ್ಕಾಗಿ ಟಿವಿ9 ಜೊತೆ ವೃತ್ತಿ ಜೀವನ ಸಾಗಿದೆ.

Read More