AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾತ್ರಿ ವೇಳೆ ಮಹಿಳೆಯ ಮನೆಯಲ್ಲಿ ಸಿಕ್ಕಿಬಿದ್ದ ಕಾಂಗ್ರೆಸ್​​ ಮುಖಂಡ: ಹಿಗ್ಗಾಮುಗ್ಗಾ ಥಳಿಸಿದ ಯುವಕರು

ರಾತ್ರಿ ವೇಳೆ ಮಹಿಳೆಯ ಮನೆಯಲ್ಲಿ ಸಿಕ್ಕಿಬಿದ್ದ ಕಾಂಗ್ರೆಸ್​​ ಮುಖಂಡ: ಹಿಗ್ಗಾಮುಗ್ಗಾ ಥಳಿಸಿದ ಯುವಕರು

ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: |

Updated on:Feb 05, 2026 | 2:18 PM

Share

ಚಿಕ್ಕಮಗಳೂರಿನಲ್ಲಿ ಕಾಂಗ್ರೆಸ್ ಮುಖಂಡ ರಾಹಿಲ್ ಷರೀಫ್ ವಿವಾಹಿತ ಮಹಿಳೆಯ ಮನೆಯಲ್ಲಿ ಸಿಕ್ಕಿಬಿದ್ದರುವ ಆರೋಪ ಕೇಳಿ ಬಂದಿದೆ. ಈ ವೇಳೆ ಯುವಕರ ಗುಂಪೊಂದು ಮಹಿಳೆಯ ಮನೆಗೆ ನುಗ್ಗಿ ಹಲ್ಲೆ ನಡೆಸಿದ್ದಾರೆ. ಇದರ ವಿಡಿಯೋ ವೈರಲ್ ಆಗಿದೆ. ಮಹಿಳೆಯು, ರಾಹಿಲ್ ಸ್ನೇಹಿತನಾಗಿದ್ದು, ಅನಾರೋಗ್ಯದಿಂದ ಔಷಧಿ ನೀಡಲು ಬಂದಿದ್ದಾಗ ಹಲ್ಲೆ ಪ್ರಯತ್ನ ನಡೆಯಿತು ಎಂದು ಸ್ಪಷ್ಟಪಡಿಸಿದ್ದಾರೆ. ಪೊಲೀಸರಿಗೆ ದೂರು ದಾಖಲಾಗಿದೆ.

ಚಿಕ್ಕಮಗಳೂರು, ಫೆ.5: ರಾತ್ರಿ ವೇಳೆ ವಿವಾಹಿತ ‌ಮಹಿಳೆಯ ಜೊತೆ ಇದ್ದ ಕಾಂಗ್ರೆಸ್ ಮುಖಂಡ ರಾಹಿಲ್​​ನ್ನು  ಅಕ್ಕಪಕ್ಕದ ಮನೆಯ ಯುವಕರು ಥಳಿಸಿದ ಘಟನೆ ಚಿಕ್ಕಮಗಳೂರು ನಗರದ ಗಾಂಧಿನಗರದಲ್ಲಿ  ನಡೆದಿದೆ. ಮಹಿಳೆಯ ಜೊತೆ ಕಾಂಗ್ರೆಸ್ ಮುಖಂಡ ಇರುವ ಫೋಟೋ ಕೂಡ ವೈರಲ್​  ಆಗಿದೆ. “ಹಿಂದೂ ಮಹಿಳೆಯ ಮನೆಯಲ್ಲಿ ನಿನಗೇನು ಕೆಲಸ” ಎಂದು ಪ್ರಶ್ನಿಸಿ ಯುವಕರು ಥಳಿಸಿದ್ದಾರೆ. ಈ  ವಿಡಿಯೋ ಕೂಡ ವೈರಲ್​ ಆಗಿದೆ.  ಇದೀಗ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಈ ಘಟನೆಯ  ಬಗ್ಗೆ ಮಹಿಳೆ ಕೂಡ ಒಂದು ವಿಡಿಯೋವನ್ನು ಹಂಚಿಕೊಂಡಿದ್ದಾರೆ.  ‘ರಾಹಿಲ್ ನನ್ನ ಸ್ನೇಹಿತ, ನನಗೆ ಆರೋಗ್ಯ ಸರಿಯಿಲ್ಲದ ಕಾರಣ ಔಷಧಿ ಕೊಡಲು ಮನೆಗೆ ಬಂದಿದ್ದರು, ಅ ಸಮಯದಲ್ಲಿ ಕೆಲವರು ಹಲ್ಲೆಗೆ ಯತ್ನಿಸಿದ್ದಾರೆ’ ಎಂದು ಮಹಿಳೆ ಹೇಳಿದ್ದಾಳೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Feb 05, 2026 09:44 AM
Follow Us
Ashwith Mavinaguni
Ashwith Mavinaguni

ಕಾಫಿನಾಡು ಚಿಕ್ಕಮಗಳೂರಿನ ಮಲೆನಾಡಿನ ಮಾವಿನಗುಣಿ ಗ್ರಾಮದಿಂದ ಬೆಂಗಳೂರಿಗೆ ಬಂದು ಪತ್ರಿಕೋದ್ಯಮ ವೃತ್ತಿ ಆರಂಭಿಸಿ, ಹಾಯ್ ಬೆಂಗಳೂರು, ಜನಶ್ರೀ, ಕಸ್ತೂರಿ, ಟೈಮ್ಸ್ ನೌ ನಲ್ಲಿ ಕೆಲಸ ಮಾಡಿದ್ದು. ಸದ್ಯ ಟಿವಿ9 ಕನ್ನಡದಲ್ಲಿ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದು. 8 ವರ್ಷಗಳ ಕಾಲ ರಾಜಕೀಯ, ಕ್ರೈಮ್ ಸೇರಿದಂತೆ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದು. ಉತ್ತಮ ಸಮಾಜಕ್ಕಾಗಿ ಟಿವಿ9 ಜೊತೆ ವೃತ್ತಿ ಜೀವನ ಸಾಗಿದೆ.

Read More