AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಸ್ ಮೇಲೆ ಅಂಡರ್ ವಲ್ಡ್ ದಾವೂದ್ ದಿ ರಿಯಲ್ ಡಾನ್ ಎಂದು ಬರಹ: ಸಿಡಿದೆದ್ದ ಭಜರಂಗದಳ

ಬಸ್ ಮೇಲೆ ಅಂಡರ್ ವಲ್ಡ್ ದಾವೂದ್ ದಿ ರಿಯಲ್ ಡಾನ್ ಎಂದು ಬರಹ: ಸಿಡಿದೆದ್ದ ಭಜರಂಗದಳ

ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: |

Updated on: Mar 26, 2026 | 5:13 PM

Share

ಚಿಕ್ಕಮಗಳೂರಿನಲ್ಲಿ ತಮಿಳುನಾಡು ಮೂಲದ ಖಾಸಗಿ ಬಸ್‌ನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಹೆಸರು ಬರೆದಿರುವುದು ವಿವಾದ ಸೃಷ್ಟಿಸಿದೆ. ದ ರಿಯಲ್ ಡಾನ್ ದಾವೂದ್ ಎಂದು ಬರೆದಿರುವ ಬಸ್ ಅನ್ನು ಭಜರಂಗದಳ ಕಾರ್ಯಕರ್ತರು ತಡೆದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇಂಜಿನಿಯರಿಂಗ್ ವಿದ್ಯಾರ್ಥಿಗಳನ್ನು ಪ್ರವಾಸಕ್ಕೆ ಕರೆತಂದಿದ್ದ ಬಸ್ ಮಾಲೀಕನ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.

ಚಿಕ್ಕಮಗಳೂರು, ಮಾರ್ಚ್​ 26: ಭೂಗತ ಪಾತಕಿ ದಾವೂದ್ ಇಬ್ರಾಹಿಂ ಹೆಸರು ಬರೆದಿರುವ ಖಾಸಗಿ ಬಸ್​ವೊಮದು ಚಿಕ್ಕಮಗಳೂರು ನಗರದಲ್ಲಿ ಕಂಡುಬಂದಿದೆ. ತಮಿಳುನಾಡಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳನ್ನ ಚಿಕ್ಕಮಗಳೂರಿಗೆ ಪ್ರವಾಸಕ್ಕೆ ಕರೆತಂದಿದ್ದ ಖಾಸಗಿ ಬಸ್​ ಮೇಲೆ ಅಂಡರ್ ವಲ್ಡ್ ದಾವೂದ್ ದಿ ರಿಯಲ್ ಡಾನ್​ ಎಂದು ಬರೆಸಲಾಗಿದೆ. ಸದ್ಯ ಇದು ಭಜರಂಗದಳ ಕಾರ್ಯಕರ್ತರು ಹಾಗೂ ಸ್ಥಳೀಯರು ಆಕ್ರೋಶಕ್ಕೆ ಕಾರಣವಾಗಿದ್ದು, ಬಸ್​ ತಡೆದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸದ್ಯ ಬಸ್ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸುವಂತೆ ಆಗ್ರಹಿಸಲಾಗಿದ್ದು, ಬಸವನಹಳ್ಳಿ ಪೊಲೀಸ್ ಠಾಣೆಗೆ ಪೊಲೀಸರು ಬಸ್ ಕರೆತಂದಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
Ashwith Mavinaguni
Ashwith Mavinaguni

ಕಾಫಿನಾಡು ಚಿಕ್ಕಮಗಳೂರಿನ ಮಲೆನಾಡಿನ ಮಾವಿನಗುಣಿ ಗ್ರಾಮದಿಂದ ಬೆಂಗಳೂರಿಗೆ ಬಂದು ಪತ್ರಿಕೋದ್ಯಮ ವೃತ್ತಿ ಆರಂಭಿಸಿ, ಹಾಯ್ ಬೆಂಗಳೂರು, ಜನಶ್ರೀ, ಕಸ್ತೂರಿ, ಟೈಮ್ಸ್ ನೌ ನಲ್ಲಿ ಕೆಲಸ ಮಾಡಿದ್ದು. ಸದ್ಯ ಟಿವಿ9 ಕನ್ನಡದಲ್ಲಿ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದು. 8 ವರ್ಷಗಳ ಕಾಲ ರಾಜಕೀಯ, ಕ್ರೈಮ್ ಸೇರಿದಂತೆ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದು. ಉತ್ತಮ ಸಮಾಜಕ್ಕಾಗಿ ಟಿವಿ9 ಜೊತೆ ವೃತ್ತಿ ಜೀವನ ಸಾಗಿದೆ.

Read More