ಆನೆ ದಾಳಿಗೆ ಇಬ್ಬರ ಸಾವು; ಅರಣ್ಯ ಇಲಾಖೆ ವಿರುದ್ಧ ರೊಚ್ಚಿಗೆದ್ದ ಗ್ರಾಮಸ್ಥರು
ಚಿಕ್ಕಮಗಳೂರಿನ ಕೆರೆಕಟ್ಟೆ ಗ್ರಾಮದಲ್ಲಿ ಆನೆ ದಾಳಿಗೆ ಇಬ್ಬರು ಬಲಿಯಾದ ಘಟನೆ ಖಂಡಿಸಿ ಗ್ರಾಮಸ್ಥರು ತೀವ್ರ ಪ್ರತಿಭಟನೆ ನಡೆಸಿದರು. ಅರಣ್ಯ ಇಲಾಖೆಯ ನಿರ್ಲಕ್ಷ್ಯ, ಅಧಿಕಾರಿಗಳ ಅಹಂಕಾರ ಮತ್ತು ಪರಿಹಾರ ವಿಳಂಬದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಅರಣ್ಯ ಸಚಿವರು, ಜಿಲ್ಲಾಧಿಕಾರಿಗಳು ಮತ್ತು ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ನ್ಯಾಯ ಒದಗಿಸುವಂತೆ ಒತ್ತಾಯಿಸಿದರು.
ಚಿಕ್ಕಮಗಳೂರು, ಅಕ್ಟೋಬರ್ 31:ಚಿಕ್ಕಮಗಳೂರು ಜಿಲ್ಲೆಯ ಕೆರೆಕಟ್ಟೆ ಗ್ರಾಮದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟ ಘಟನೆ ಸಂಬಂಧ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅರಣ್ಯ ಇಲಾಖೆಯ ನಿರ್ಲಕ್ಷ್ಯ ಮತ್ತು ಅಧಿಕಾರಿಗಳ ನಿಷ್ಕ್ರಿಯತೆಯ ಬಗ್ಗೆ ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದರು. ಮೃತರ ಕುಟುಂಬಗಳಿಗೆ ನ್ಯಾಯ ಮತ್ತು ಸೂಕ್ತ ಪರಿಹಾರ ನೀಡುವಂತೆ ಒತ್ತಾಯಿಸಿದ್ದಾರೆ.
ಪ್ರತಿಭಟನಾಕಾರರು ಅರಣ್ಯ ಸಚಿವರು, ಜಿಲ್ಲಾಧಿಕಾರಿಗಳು ಮತ್ತು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು ತಕ್ಷಣ ಸ್ಥಳಕ್ಕೆ ಭೇಟಿ ನೀಡುವಂತೆ ಆಗ್ರಹಿಸಿದ್ದಾರೆ. ಅರಣ್ಯ ಇಲಾಖೆ ವನ್ಯಜೀವಿ ನಿರ್ವಹಣೆಯಲ್ಲಿ ವಿಫಲವಾಗಿದೆ ಎಂದು ದೂರಿದ್ದಾರೆ. ಡಿ.ಎಫ್.ಓ ಜನರ ವಿಶ್ವಾಸ ಕಳೆದುಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ. ಪ್ರಾಣಿಗಳಿಗೆ ಹಾನಿಯಾದರೆ ಕಾನೂನು ಕ್ರಮ ತೆಗೆದುಕೊಳ್ಳುವ ಸರ್ಕಾರ, ಮನುಷ್ಯ ಜೀವಕ್ಕೆ ಯಾವುದೇ ಬೆಲೆ ನೀಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಷ್ಟು ದಿವಸ ತಾಳ್ಮೆಯಿಂದ ಕಾದಿದ್ದೇವೆ, ಇನ್ನು ತಾಳ್ಮೆ ಕಾಯಲು ಸಾಧ್ಯವಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

