ಚಿಕ್ಕಮಗಳೂರು: ಈ ಗ್ರಾಮಗಳಲ್ಲಿ ಹಿಂಡುಹಿಂಡಾಗಿ ಓಡಾಡುತ್ತಿವೆ ಆನೆಗಳು, ಎಚ್ಚರ
ಚಿಕ್ಕಮಗಳೂರು ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಕಾಡಾನೆ ಹಾವಳಿ ಮತ್ತೆ ಹೆಚ್ಚಾಗಿದೆ. ತುಡುಕೂರು, ಹಳೆ ಆಲ್ದೂರು, ಮಡೆನೆರಲು ಸೇರಿದಂತೆ ಹಲವು ಪ್ರದೇಶಗಳಲ್ಲಿ ಕಾಡಾನೆಗಳ ಹಿಂಡು ಸಂಚರಿಸುತ್ತಿದ್ದು, ಕಾಫಿತೋಟ ಸೇರಿದಂತೆ ಗದ್ದೆಗಳಿಗೆ ಕೆಲಸಕ್ಕೆ ತೆರಳದಂತೆ ಜನರಿಗೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.
ಚಿಕ್ಕಮಗಳೂರು, ನವೆಂಬರ್ 7: ಚಿಕ್ಕಮಗಳೂರು ಜಿಲ್ಲೆಯಲ್ಲಿ ಮತ್ತೆ ಕಾಡಾನೆ ಹಾವಳಿ ಜೋರಾಗಿದೆ. ಜಿಲ್ಲೆಯ ತುಡುಕೂರು ಗ್ರಾಮದ ಕಾಫಿ ತೋಟದಲ್ಲಿ ಬೀಡುಬಿಟ್ಟಿರುವ 24 ಕಾಡಾನೆಗಳ ಹಿಂಡು ಹಳೆ ಆಲ್ದೂರು, ಮಡೆನೆರಲು ಸುತ್ತಮುತ್ತ ಸಂಚಾರ ಮಾಡುತ್ತಿದೆ. ಸದ್ಯ ಸ್ಥಳಕ್ಕೆ ಇಟಿಎಫ್ ಸಿಬ್ಬಂದಿ, ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿದ್ದಾರೆ. ಮುನ್ನೆಚ್ಚರಿಕಾ ಕ್ರಮವಾಗಿ ಈ ಪ್ರದೇಶಗಳ ರೈತರು ಹಾಗೂ ಕಾರ್ಮಿಕರು ಕಾಫಿತೋಟ ಸೇರಿದಂತೆ ಗದ್ದೆಗಳಿಗೆ ಕೆಲಸಕ್ಕೆ ತೆರಳದಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ