ಚಿಕ್ಕಮಗಳೂರು: ಈ ಗ್ರಾಮಗಳಲ್ಲಿ ಹಿಂಡುಹಿಂಡಾಗಿ ಓಡಾಡುತ್ತಿವೆ ಆನೆಗಳು, ಎಚ್ಚರ

| Updated By: ಗಣಪತಿ ಶರ್ಮ

Updated on: Nov 07, 2024 | 9:46 AM

ಚಿಕ್ಕಮಗಳೂರು ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಕಾಡಾನೆ ಹಾವಳಿ ಮತ್ತೆ ಹೆಚ್ಚಾಗಿದೆ. ತುಡುಕೂರು, ಹಳೆ ಆಲ್ದೂರು, ಮಡೆನೆರಲು ಸೇರಿದಂತೆ ಹಲವು ಪ್ರದೇಶಗಳಲ್ಲಿ ಕಾಡಾನೆಗಳ ಹಿಂಡು ಸಂಚರಿಸುತ್ತಿದ್ದು, ಕಾಫಿತೋಟ ಸೇರಿದಂತೆ ಗದ್ದೆಗಳಿಗೆ ಕೆಲಸಕ್ಕೆ ತೆರಳದಂತೆ ಜನರಿಗೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.

ಚಿಕ್ಕಮಗಳೂರು, ನವೆಂಬರ್ 7: ಚಿಕ್ಕಮಗಳೂರು ಜಿಲ್ಲೆಯಲ್ಲಿ ಮತ್ತೆ ಕಾಡಾನೆ ಹಾವಳಿ ಜೋರಾಗಿದೆ. ಜಿಲ್ಲೆಯ ತುಡುಕೂರು ಗ್ರಾಮದ ಕಾಫಿ ತೋಟದಲ್ಲಿ ಬೀಡುಬಿಟ್ಟಿರುವ 24 ಕಾಡಾನೆಗಳ ಹಿಂಡು ಹಳೆ ಆಲ್ದೂರು, ಮಡೆನೆರಲು ಸುತ್ತಮುತ್ತ ಸಂಚಾರ ಮಾಡುತ್ತಿದೆ. ಸದ್ಯ ಸ್ಥಳಕ್ಕೆ ಇಟಿಎಫ್​ ಸಿಬ್ಬಂದಿ, ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿದ್ದಾರೆ. ಮುನ್ನೆಚ್ಚರಿಕಾ ಕ್ರಮವಾಗಿ ಈ ಪ್ರದೇಶಗಳ ರೈತರು ಹಾಗೂ ಕಾರ್ಮಿಕರು ಕಾಫಿತೋಟ ಸೇರಿದಂತೆ ಗದ್ದೆಗಳಿಗೆ ಕೆಲಸಕ್ಕೆ ತೆರಳದಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ